AccidentBlogCrime newsHighlightsLocal newsNational NewsObituaryOthersState newsTrending

ಸತ್ತ ಇಲಿ ಬಿಸಾಡಲು ಹೋಗಿ ವಿದ್ಯುತ್ ಸ್ಪರ್ಷ : ವ್ಯಕ್ತಿ ಸಾವು

Aware others:

ಮೃತ್ಯುವಾಗಿ ಬಂದ ಸತ್ತ ಇಲಿ!?

ವಿದ್ಯುತ್ ತಂತಿ ಸ್ಪರ್ಷಿಸಿ ಸಾವನ್ನಪ್ಪಿದ ಇರ್ಷಾದ್

ಕುಂದಾಪುರ: ಸತ್ತ ಇಲಿಯನ್ನು ಮನೆಯಿಂದ ಹೊರಗೆ ಬಿಸಾಡಲು ಹೋದ ವ್ಯಕ್ತಿಯೊಬ್ಬ ಮನೆಯ ಗೇಟಿನ ಮುಂಭಾಗ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ಸಾವನ್ನಪ್ಪಿದ ಘಟನೆ ಶಿರೂರು ಗ್ರಾಮದ ಹಡವಿನಕೋಣೆ ಎಂಬಲ್ಲಿ ನಡೆದಿದೆ. ಹಡವಿನಕೋಣೆ ಮುದ್ರುಮಕ್ಕಿ ಸಮೀಪದ ನಿವಾಸಿ ಕುರುಡಿ ಇರ್ಷಾದ್ (52) ಮೃತಪಟ್ಟವರು‌

ರಾತ್ರಿ ಸುರಿದ ಗಾಳಿ ಮಳೆಗೆ ಹಡವಿನಕೋಣೆಯಿಂದ ಮುದ್ರುಮಕ್ಕಿಗೆ ತೆರಳುವ ಮಾರ್ಗದಲ್ಲಿ ಇದ್ದ ವಿದ್ಯುತ್ ತಂತಿ ತುಂಡಾಗಿ ಬಿದ್ದಿತ್ತು. ಬೆಳಿಗ್ಗೆ ಮನೆಯೊಳಕ್ಕೆ ಸತ್ತುಹೋಗಿತ್ತು ಇಲಿಯನ್ನು ಹೊರಕ್ಕೆ ಬೀಸಾಡುವ ಸಲುವಾಗಿ ಗೇಟ್ ಹೊರಕ್ಕೆ ಬಂದಾಗ ಅಚಾನಕ್ಕಾಗಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ತುಳಿದಿದ್ದು, ವಿದ್ಯುತ್‌ ತಗುಲಿ ಅವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಘಟನೆಯ ಮಾಹಿತಿ ದೊರೆತ ತಕ್ಷಣ ಈ ಭಾಗದ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕೊಂಡೊಯ್ಯಲಾಗಿದೆ. ಮೃತರು ಮಡದಿ, ನಾಲ್ವರು ಮಕ್ಕಳನ್ನು ಅಗಲಿದ್ದಾರೆ.

ಘಟನಾ ಸ್ಥಳಕ್ಕೆ ಬೈಂದೂರು ಮೆಸ್ಕಾಂನ ಸಹಾಯಕ ಇಂಜಿನಿಯರ್ ಯಶವಂತ್ ಹಾಗೂ ಸಿಬ್ಬಂದಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದುಕೊಂಡರು. ಜಿಪಂ ಮಾಜಿ ಅಧ್ಯಕ್ಷ ಎಸ್. ರಾಜು ಪೂಜಾರಿ, ಶಿರೂರು ಮುಖಂಡ ನೂರ್ ಮೊಹಮ್ಮದ್ ಮೊದಲಾದವರು ಈ ಸಂದರ್ಭ ಇದ್ದರು. ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Aware others:

Leave a Reply

Your email address will not be published. Required fields are marked *

error: Content is protected !!