BlogLocal newsNational NewsOthersPoliticsState newsTrending

ರಘುಪತಿ ಭಟ್ ಗೆ ನೋಟೀಸ್ ಕೊಟ್ರೆ ನಂಗೆ ಖುಷಿ – ಈಶ್ವರಪ್ಪ..!!

Aware others:

ಶಿವಮೊಗ್ಗ: ವಿಧಾನಪರಿಷತ್ ಚುನಾವಣೆಯಲ್ಲಿ ಬಿಜೆಪಿಗೆ ಸೆಡ್ಡು ಹೊಡೆದ ರಘುಪತಿ ಭಟ್ ಗೆ ಜಿಲ್ಲಾ ಬಿಜೆಪಿ ಉಚ್ಛಾಟನೆ ಮಾಡುವಂತೆ ರಾಜ್ಯ ನಾಯಕರಿಗೆ ಶಿಫಾರಸ್ಸು ಮಾಡುತ್ತಿದ್ದಂತೆ ಮಾಜೀ ಉಪ ಮುಖ್ಯಮಂತ್ರಿ, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಬಂಡಾಯ ಅಭ್ಯರ್ಥಿ ಕೆ ಎಸ್ ಈಶ್ವರಪ್ಪ ಪ್ರತಿಕ್ರಿಯಿಸಿದ್ದಾರೆ.

ಮಂಗಳವಾರ ತಮ್ಮ ಮನೆಯಲ್ಲಿ ರಾಷ್ಟ್ರಭಕ್ತ ಬಳಗದ ಸಭೆಯಲ್ಲಿ ಮಾತನಾಡುತ್ತಾ, ಚುನಾವಣೆ ಮುಗಿಯುತ್ತಿದ್ದಂತೆ ರಘುಪತಿಗೆ ನೋಟಿಸ್ ಬರಬಹುದು. ನನಗೆ ಆಗ ಖುಷಿ. ನಾನೊಬ್ಬನೇ ಆಗಿದ್ದೆನಲ್ಲ, ಸದ್ಯ ಈಗ ಭಟ್ರು ಜೊತೆಗೆ ಬರ್ತಾರಲ್ಲ ಸಮಾಧಾನ ಎಂದು ಈಶ್ವರಪ್ಪ ತಮಾಷೆಯಾಗಿ ನುಡಿದರು. ಮೇಲ್ನೋಟಕ್ಕೆ ಇದು ತಮಾಷೆಯಾಗಿ ಕಂಡರೂ ತನ್ನ ವಿರೋಧ ಬಣದ ಸದಸ್ಯರನ್ನು ಹೆಚ್ಚಿಸಿಕೊಳ್ಳುವಲ್ಲಿ ಹಿಂದೂ ಹುಲಿ ಮುನ್ನುಗ್ಗುತ್ತಿರುವುದು ಸ್ಪಷ್ಟವಾಗಿದೆ.

ಅದಕ್ಕಾಗಿಯೇ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಹಂಚಿಕೆ ವಿಚಾರಕ್ಕೆ ಸಂಬಂಧಿಸಿ ಸಿಡಿದೆದ್ದಿದ್ದ ಈಶ್ವರಪ್ಪ, ಇದೀಗ ನೈಋತ್ಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಬಂಡಾಯ ಅಭ್ಯರ್ಥಿಯೂ ಆಗಿರುವ ಮಾಜಿ ಶಾಸಕ ರಘುಪತಿ ಭಟ್ ಅವರಿಗೆ ಬೆಂಬಲ ಘೋಷಿಸಿದ್ದಾರೆ. ಈ ಸಂದರ್ಭ ಪ್ರತಿಕ್ರಿಯಿಸಿದ ಅವರು, ಈಶ್ವರಪ್ಪ ಅಂದರೆ ಪಕ್ಷ ಎನ್ನುತ್ತಿದ್ದ ಸಂದರ್ಭದಲ್ಲೇ ಪಕ್ಷೇತರನಾಗಿ ಸ್ಪರ್ಧಿಸುವ ಸಂದರ್ಭ ಎದುರಾಯಿತು. ಅದೇ ರೀತಿ ನಾನು ಸತ್ತರೆ ನನ್ನ ಎದೆ ಮೇಲೆ ಬಿಜೆಪಿ ಬಾವುಟ ಇರಬೇಕು ಎಂದು ಹೇಳುವ ರಘುಪತಿ ಭಟ್ ಅವರಿಗೂ ಪಕ್ಷದಲ್ಲಿ ಮೋಸವಾಯಿತು. ನಮ್ಮ ಸ್ಪರ್ಧೆಯಿಂದ ಎಷ್ಟರಮಟ್ಟಿಗೆ ಪಕ್ಷ ಶುದ್ಧೀಕರಣ ಆಗುತ್ತದೆ ಎಂಬುದು ಲೋಕಸಭೆ, ವಿಧಾನ ಪರಿಷತ್ ಚುನಾವಣೆ ಫಲಿತಾಂಶದ ಬಳಿಕ ಗೊತ್ತಾಗುತ್ತದೆ ಎಂದು ಹೇಳಿದರು.


Aware others:

Leave a Reply

Your email address will not be published. Required fields are marked *

error: Content is protected !!