ಬೈಂದೂರು: ಕುಡಿಯುವ ನೀರಿಗೆ ಬರ – ಪ್ರಥಮ ದರ್ಜೆ ಕಾಲೇಜಿಗೆ ರಜೆ ಘೋಷಣೆ

ಬೈಂದೂರು: ಗುರುವಾರ ಸಂಜೆ ಬೈಂದೂರು ವ್ಯಾಪ್ತಿಯಲ್ಲಿ ಬೀಸಿದ ಭಾರೀ ಬಿರುಗಾಳಿ ಮಳೆಗೆ ಅಪಾರ ಆಸ್ತಿ ಪಾಸ್ತಿ ನಷ್ಟ ಆಗಿರುವುದರ ಜೊತೆಗೆ ಗುರುವಾರ ಮಧ್ಯಾಹ್ನದಿಂದಲೇ ಬೈಂದೂರು ವಿದ್ಯುತ್ ಸಂಪರ್ಕದಿಂದ ವಂಚಿತವಾಗಿತ್ತು. ಈ ಹಿನ್ನೆಲೆಯಲ್ಲಿ ವಿದ್ಯುತ್ ಆಧಾರಿತ ಎಲ್ಲಾ ಕೆಲಸಗಳು ಸ್ಥಗಿತಗೊಂಡಿವೆ. ಬೈಂದೂರಿನ ಸರ್ಕಾರೀ ಪ್ರಥಮ ದರ್ಜೆ ಕಾಲೇಜಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದ್ದು, ಮಕ್ಕಳಿಗೆ ರಜೆ ಘೋಷಣೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.
ಬೆಳಿಗ್ಗೆ ಎಂದಿನಂತೆ ಕಾಲೇಜಿಗೆ ಬಂದ ವಿದ್ಯಾರ್ಥಿಗಳಿಗೆ ಕುಡಿಯುವ ನೀರು ಸರಬರಾಜು ಮಾಡುವುದು ಸಾಧ್ಯವಾಗಿರಲಿಲ್ಲ. ಇದನ್ನು ಮನಗಂಡು ಕಾಲೇಜು ಆಡಳಿತ ಮಂಡಳಿ ಈ ತೀರ್ಮಾನ ಕೈಗೊಂಡಿದೆ ಎಂದು ತಿಳಿದು ಬಂದಿದೆ. ಎರಡು ತರಗತಿಗಳನ್ನು ಮುಗಿಸಿದ ಬಳಿಕ ವಿದ್ಯಾರ್ಥಿಗಳನ್ನು ಮನೆಗೆ ಕಳಿಸಲಾಗಿದೆ.
