BlogGovernmentHighlightsLocal newsNational NewsOthersPoliticsState newsSuccess storiesTrending

ಶಿವಮೊಗ್ಗದಲ್ಲಿ ಮುಗಿಲುಮುಟ್ಟಿದ ಸಂಭ್ರಮಾಚರಣೆ

Aware others:

1,82,000 ಮತಗಳ ಅಂತರದಲ್ಲಿ ಗೆದ್ದು ಬೀಗಿದ ಬಿ ವೈ ಆರ್.

ಶಿವಮೊಗ್ಗ: ಲೋಕಸಭಾ ಚುನಾವಣೆಯ ಮತ ಎಣಿಕೆ ಕಾರ್ಯಕ್ರಮ ಅಂತಿಮ ಹಂತದಲ್ಲಿದ್ದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿವೈ ರಾಘವೇಂದ್ರ ನಿರೀಕ್ಷೆಯಂತೆ ಒಂದು ಲಕ್ಷದ 82 ಸಾವಿರ ಮತಗಳ ಅಂತರದಿಂದ ಕಾಂಗ್ರೆಸ್ಸಿನ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಅವರನ್ನು ಸೋಲಿಸಿ ವಿಜಯದ ನಗು ಬೀರಿದ್ದಾರೆ. ಪ್ರತಿ ಹಂತದ ಮತ ಎಣಿಕೆಯಲ್ಲಿಯೂ ಮುನ್ನಡೆ ಸಾಧಿಸುತ್ತಾ ಬಂದಿದ್ದ ಬಿ ವೈ ರಾಘವೇಂದ್ರ ಗೆಲುವು ನಿಶ್ಚಿತವಾಗುತ್ತಿದ್ದಂತೆ ಬಿಜೆಪಿ ಕಾರ್ಯಕರ್ತರ ಸಂಭ್ರಮ ಮುಗಿದು ಮುಟ್ಟಿತ್ತು. 

ರಾಘವೇಂದ್ರ ಅವರ ಗೆಲುವು ಘೋಷಣೆಯಾಗುತ್ತಿದ್ದಂತೆ ಬಿಜೆಪಿ ಕಾರ್ಯಕರ್ತರು 5 ಕ್ಕಿಂತ ತೂಕದ ಕೊಬ್ಬರಿ ಹಾರವನ್ನು ಸಿದ್ಧಪಡಿಸಿ ಸಂಭ್ರಮಾಚರಣೆಯಲ್ಲಿ ರಾಘವೇಂದ್ರ ಅವರಿಗೆ ಹಾಕಲು ಸಿದ್ಧತೆ ನಡೆಸಿದ್ದಾರೆ ಒಟ್ಟಾರೆಯಾಗಿ ಬೈಂದೂರು ಮತ್ತು ಶಿವಮೊಗ್ಗ ಲೋಕಸಭಾ ಕ್ಷೇತ್ರ ದಲ್ಲಿ ಬಿಜೆಪಿ ಭರ್ಜರಿ ಜಯಗಳಿಸಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರ ಕುರ್ಚಿ ಬಲಗೊಂಡಂತಾಗಿದೆ.


Aware others:

Leave a Reply

Your email address will not be published. Required fields are marked *

error: Content is protected !!