AccidentBlogGovernmentHighlightsHuman storiesLifestyleLocal newsNatureOthersState newsTop StoriesTrendingWomen Care

ಕುಂದಾಪುರ: ಭಾರೀ ಮಳೆಗೆ ಹಲವೆಡೆ ನೆರೆ – ನಾವುಂದ, ಸಾಲ್ಬುಡ, ಬಡಾಕೆರೆ ಭಾಗದ ಜನರಿಗೆ ಜಲ ದಿಗ್ಭಂಧನ

Aware others:

ಕುಂದಾಪುರ: ಕಳೆದ ಮೂರು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಗೆ ಬೈಂದೂರಿನ ಹಲವೆಡೆ ಜಲದಿಗ್ಬಂಧನ ಏರ್ಪಟ್ಟಿದೆ. ಬೈಂದೂರು ವಿಧಾನಸಭಾ ಕ್ಷೇತ್ರದ ನಾವುಂದ, ಸಾಲ್ಬುಡ, ಬಡಾಕೆರೆ ಭಾಗದ ಪ್ರದೇಶ ಮಳೆ ನೀರಿನಿಂದ ಜಲಾವೃತ್ತವಾಗಿದೆ. ಮನೆಗಳಿಗೂ ನೀರು ನುಗ್ಗಿದ್ದು, ಗುರುವಾರ ಮುಂಜಾನೆಯಿಂದಲೇ ಇಲ್ಲಿನ ನಿವಾಸಿಗಳು ದೋಣಿಯನ್ನು ಆಶ್ರಯಿಸುವಂತಾಗಿದೆ.

ಪ್ರತಿ ವರ್ಷ ಮಳೆಗಾಲ ಬಂದರೆ ನಮಗೆ ಸಮಸ್ಯೆ ತಪ್ಪಿದ್ದಲ್ಲ. ಮಳೆಗಾಲದಲ್ಲಿನ ಇಲ್ಲಿನ ನೂರಕ್ಕೂ ಅಧಿಕ‌ ಮನೆಯವರಿಗೆ ತಲೆನೋವು ಕಟ್ಟಿಟ್ಟಬುತ್ತಿ. ಹೆಚ್ಚುಕಮ್ಮಿ ನಾಲ್ಕೈದು ದಿನವಾದರೂ ಮನೆ ಬಿಟ್ಟು ಹೊರಬಾರಲಾಗದ ದುಸ್ಥಿತಿ. ಹಿಡಿ ಉಪ್ಪು, ದಿನಸಿ, ತರಕಾರಿ ತರಬೇಕಾದರೂ ಕೂಡ ದೋಣಿ ಬೇಕು. ಓಟು ಕೇಳಲು ಬರುವ ಜನಪ್ರತಿನಿಧಿಗಳು ಮಳೆಗಾಲದ ನೆರೆ ಸಮಯ ಬಂದು ವೀಕ್ಷಿಸಿ ಹೋದವರು ಮತ್ತೆ ಈ ಕಡೆ ತಲೆಯನ್ನು ಹಾಕೋದಿಲ್ಲ. ಸರ್ಕಾರಿ ಅಧಿಕಾರಿಗಳು ಮಳೆಗಾಲದ ಮೊದಲು ಪ್ರವಾಹದ ಬಂದು ಸ್ಥಳವನ್ನು ವೀಕ್ಷಿಸುತ್ತಾರೆ ಹೊರತು ಇದುವರೆಗೂ ಯಾವುದೇ ಪ್ರಯೋಜನವಾಗಲಿಲ್ಲ ಎನ್ನುತ್ತಾರೆ ಇಲ್ಲಿನ ನಿವಾಸಿಗಳು.

ನಾವುಂದ, ಬಡಾಕೆರೆ, ಮರವಂತೆ, ಸಾಲ್ಬುಡ, ಅರೆಹೊಳೆ, ಕೋಣ್ಕಿ, ಕುದ್ರು, ಚಿಕ್ಕಳ್ಳಿ, ಪಡುಕೋಣೆ ಭಾಗದಲ್ಲಿ ನೆರೆ ಸಮಸ್ಯೆ ಈ ವರ್ಷವೇನೂ ಹೊಸತಲ್ಲ. ಹಲವು ದಶಕಗಳಿಂದ ಇಲ್ಲಿನ ಜನಕ್ಕೆ ಮಳೆಗಾಲ ಶಾಪವೆಂದರೂ ತಪ್ಪಾಗದು. ಮಳೆಗಾಲದಲ್ಲಿ ಇಲ್ಲಿ ಮೂರ್ನಾಲ್ಕು ದೋಣಿ ಇಲ್ಲಿಗೆ ಮೀಸಲಿಡಬೇಕು. ಅನಾರೋಗ್ಯ ಪೀಡಿತರು ಸಹಿತ ಆಹಾರ ಸಾಮಾಗ್ರಿ, ದಿನಸಿ ತರಬೇಕಾದರೆ ದೋಣಿ ಏರಿ ಪೇಟೆಗೆ ಬರಬೇಕು. ಒಂದು ದಡದಿಂದ ಮತ್ತೊಂದು ದಡಕ್ಕೆ ಸುಮಾರು ಮೂರು ಕಿಲೋಮೀಟರ್ ದೂರ ದೋಣಿ ಚಲಾಯಿಸುವುದು ನಿಜಕ್ಕೂ ಸಾಹಸವಾಗಿದೆ. ಪ್ರತಿವರ್ಷ ಮಳೆಗಾಲದಲ್ಲಿ ಈ ಭಾಗದ ಯುವಕರ ಸಹಿತ ದೋಣಿ ಚಲಾಯಿಸಲು ತಿಳಿದವರು ಹಲವು ಮಂದಿ ದೋಣಿ ಯಾನದ ಮೂಲಕ ಸಾರ್ವಜನಿಕರಿಗೆ ನೆರವಾಗುವ ಸಾಹಸಿಗಳಾಗಿ ಶ್ರಮದಾನ ಮಾಡುತ್ತಾರೆ.

ಬೈಂದೂರು ಅಗ್ನಿಶಾಮಕದ ಸಿಬ್ಬಂದಿಗಳು ಬೆಳಿಗ್ಗೆಯಿಂದ ಕೂಡ ನೆರೆ ಪ್ರದೇಶದಲ್ಲಿ ಕಾರ್ಯಚರಣೆ ನಡೆಸುತ್ತಿದ್ದಾರೆ. ಈ ಸಂದರ್ಭದಲ್ಲಿ ಬೈಂದೂರು ತಾಲೂಕು ಆಡಳಿತ ಅಧಿಕಾರಿ ಪ್ರದೀಪ್, ತಾಲೂಕು ಪಂಚಾಯತಿಯು ಭಾರತಿ, ಬೈಂದೂರು ಅಗ್ನಿಶಾಮಕದ ಸಿಬ್ಬಂದಿಗಳು, ಬೈಂದೂರು ಆರಕ್ಷಕ ಠಾಣಾ ಸಿಬ್ಬಂದಿ,  ನಾವುಂದ ಹಾಗೂ ನಾಡ ಗ್ರಾಮ ಪಂಚಾಯತ್ ಅಧಿಕಾರಿಗಳು  ಸ್ಥಳಕ್ಕೆ  ಆಗಮಿಸಿ ಮುನ್ನೆಚ್ಚರಿಕೆ ಕ್ರಮವನ್ನು ಕೈಗೊಳ್ಳುವಂತೆ ಸಾರ್ವಜನಿಕ ಸೂಚಿಸಿದ್ದಾರೆ.


Aware others:

Leave a Reply

Your email address will not be published. Required fields are marked *

error: Content is protected !!