BlogHealthHighlightsLocal newsOthersState newsTop StoriesTrending

ಗಂಗೊಳ್ಳಿ: ತಂಬಾಕು ವಿರೋಧಿ ಕಾರ್ಯಕ್ರಮ

Aware others:

ಗಂಗೊಳ್ಳಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಬೈಂದೂರು ತಾಲೂಕು ತ್ರಾಸಿ ವಲಯದ ಜನಜಾಗೃತಿ ವೇದಿಕೆ ವತಿಯಿಂದ ಗುಜ್ಜಾಡಿಯ ಎಂ. ಭಾಸ್ಕರ್ ಪೈ ಸರಕಾರಿ ಪ್ರೌಢ ಶಾಲೆಯಲ್ಲಿ ತಂಬಾಕು ವಿರೋಧಿ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಜನಜಾಗೃತಿ ವೇದಿಕೆ ಬೈಂದೂರು ತಾಲೂಕು ಅಧ್ಯಕ್ಷ ಸುಧಾಕರ ಆಚಾರ್ಯ, ಇಂದಿನ ಯುವ ಜನಾಂಗ ದುಶ್ಚಟಗಳಿಗೆ ಬಲಿಯಾಗುತ್ತಿದ್ದಾರೆ. ಮದ್ಯಪಾನ, ಧೂಮಪಾನದಂತಹ ದುಶ್ಚಟಗಳಿಗೆ ಬಲಿ ಬಿದ್ದು ಜೀವವನ್ನೇ ಕಳೆದುಕೊಳ್ಳುತ್ತಿದ್ದಾರೆ. ಹೀಗಾಗಿ ದುಶ್ಚಟಗಳ ಬಗ್ಗೆ ಜಾಗೃತಿ ಮೂಡಿಸಿ ಉತ್ತಮ ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಜನಜಾಗೃತಿ ವೇದಿಕೆ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ ಎಂದರು.

ಕಂಚುಗೋಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹಶಿಕ್ಷಕಿ ನಾಗಮ್ಮ ಸಂಪನ್ಮೂಲ ವ್ಯಕ್ತಿಯಾಗಿ ಮಾಹಿತಿ ನೀಡಿದರು. ಸ್ವ ಸಹಾಯ ಸಂಘಗಳ ತ್ರಾಸಿ ವಲಯ ಅಧ್ಯಕ್ಷೆ ಪ್ರಮೀಳಾ ಗಾಣಿಗ, ಶಾಲೆಯ ಮುಖ್ಯೋಪಾಧ್ಯಾಯಿನಿ ಜಯಶೀಲ ನಾಯಕ್, ಒಕ್ಕೂಟ ಅಧ್ಯಕ್ಷೆ ರೇಖಾ, ಶಾಲೆಯ ಶಿಕ್ಷಕರು, ಸೇವಾ ಪ್ರತಿನಿಧಿಗಳು ಉಪಸ್ಥಿತರಿದ್ದರು.


Aware others:

Leave a Reply

Your email address will not be published. Required fields are marked *

error: Content is protected !!