ಗಂಗೊಳ್ಳಿ : ಪೊಲೀಸ್ ಠಾಣೆ ವತಿಯಿಂದ ಫೋಕ್ಸೋ ಮಾಹಿತಿ
ಗಂಗೊಳ್ಳಿ : ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗ ಗಂಗೊಳ್ಳಿ, ಗಂಗೊಳ್ಳಿ ಪೊಲೀಸ್ ಠಾಣೆ ಹಾಗೂ ಸಿಡಬ್ಲ್ಯುಸಿ ನಮ್ಮ ಭೂಮಿ ಸಂಸ್ಥೆಯ ಜಂಟಿ ಆಶ್ರಯದಲ್ಲಿ ಫೋಕ್ಸೋ ಕಾಯ್ದೆ ಮಾಹಿತಿ ಕಾರ್ಯಕ್ರಮ ಶಾಲೆಯ ಸಭಾಂಗಣದಲ್ಲಿ ಗುರುವಾರ ನಡೆಯಿತು.
ಸಂಪನ್ಮೂಲ ವ್ಯಕ್ತಿಯಾಗಿದ್ದ ಗಂಗೊಳ್ಳಿ ಪೊಲೀಸ್ ಠಾಣೆಯ ಉಪನಿರೀಕ್ಷಕ (ತನಿಖೆ) ಬಸವರಾಜ್ ಕನಶೆಟ್ಟಿ ಅವರು ಫೋಕ್ಸೋ ಕಾಯ್ದೆಯ ಮಾಹಿತಿ ನೀಡಿದರು. ಪ್ರೌಢಶಾಲಾ ವಿಭಾಗದ ಉಪಪ್ರಾಂಶುಪಾಲ ಗೋಪಾಲ ದೇವಾಡಿಗ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ನಮ್ಮ ಭೂಮಿ ಸಂಸ್ಥೆಯ ಕ್ಷೇತ್ರ ಕಾರ್ಯದರ್ಶಿ ಅನಿತಾ ಉಪಸ್ಥಿತರಿದ್ದರು.
