ಕುಂದಾಪುರ: ಶ್ರೀ ವೆಂಕಟರಮಣ ಶಾಲೆಯಲ್ಲಿ ವಿದ್ಯಾರ್ಥಿಸಂಸತ್ತಿನ ಪದಗ್ರಹಣ
ಕುಂದಾಪುರ: ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ಕುಂದಾಪುರದ ವಿದ್ಯಾರ್ಥಿ ಸಂಸತ್ತಿನ ಪದಗ್ರಹಣ ಕಾರ್ಯಕ್ರಮವು ಇತ್ತೀಚೆಗೆ ನಡೆಯಿತು.

ಸಂಸ್ಥೆಯ ಅಧ್ಯಕ್ಷ ಕೆ. ರಾಮಕೃಷ್ಣ ಕಾಮತ್ ಅಧ್ಯಕ್ಷತೆ ವಹಿಸಿದ್ದರು ಕಾರ್ಯದರ್ಶಿ .ಕೆ.ರಾಧಾಕೃಷ್ಣ ಶೆಣೈ, ಉಡುಪಿ ಜಿಲ್ಲೆಯ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಗಣಪತಿ.ಕೆ ಹಾಗೂ ಸುಮಾ.ಯು.ಪುತ್ರನ್ ಶಾಲಾ ಶಿಕ್ಷಕವೃಂದದವರು ಉಪಸ್ಥಿತರಿದ್ದರು. ಶಿಕ್ಷಕಿ ಆಶಾ ಬಾಯಿ ಸಂಸತ್ ಸದಸ್ಯರಿಗೆ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.
