ಕುಂದಾಪುರ: ತಾಲೂಕು ಸಮ್ಮೇಳನದ ಸರ್ವಾಧ್ಯಕ್ಷರಾಗಿ ಪ್ರೊ. ಮೊಳಹಳ್ಳಿ ಬಾಲಕೃಷ್ಣ ಶೆಟ್ಟಿ ಆಯ್ಕೆ

ಕುಂದಾಪುರ: ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಕುಂದಾಪುರ ತಾಲೂಕು ಘಟಕದ ಆಶ್ರಯದಲ್ಲಿ ನಡೆಯುವ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನವ ಅಧ್ಯಕ್ಷರಾಗಿ ಸರ್ವಾಧ್ಯಕ್ಷರಾಗಿ ಮಂಗಳೂರು ಶ್ರೀ ರಾಮಕೃಷ್ಣ ಕಾಲೇಜಿನ ಪ್ರಾಂಶುಪಾಲ ಪ್ರೊ. ಮೊಳಹಳ್ಳಿ ಬಾಲಕೃಷ್ಣ ಶೆಟ್ಟಿ ಆಯ್ಕೆಯಾಗಿದ್ದಾರೆ ಎಂದು ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲಾ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಹೇಳಿದ್ದಾರೆ.

ಕಟೀಲು ಶ್ರೀ ದುರ್ಗಾಪರಮೇಶ್ವರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿ 2019ರಲ್ಲಿ ವಯೋ ನಿವೃತ್ತರಾದವರು. ಇವರು ಕನ್ನಡಕ್ಕೆ ತನ್ನದೆಯಾದ ಕೊಡುಗೆ ನೀಡುತ್ತಾ ಬಂದಿರುವ ಮೊಳಹಳ್ಳಿ ಬಾಲಕರತಷ್ಣ ಶೆಟ್ಟಿ, ಹಲವಾರು ಸಾಹಿತ್ಯ ಕೃತಿಗಳು, ಲೇಖನಗಳ ಮೂಲಕ ಪ್ರಸಿದ್ಧರಾಗಿದ್ದಾರೆ.
ಈ ಬಾರಿಯ ತಾಲೂಕು ಸಾಹಿತ್ಯ ಸಮ್ಮೇಳನವು ಆಗಸ್ಟ್ 31ರಿಂದ ಸೆಪ್ಟಂವರ್ 1ರ ವರೆಗೆ ಎರಡು ದಿನಗಳ ಕಾಲ ಬಿದ್ಕಲ್‍ಕಟ್ಟೆಯ ಕರ್ನಾಟಕ ಪಬ್ಲಿಕ್ ಸ್ಕೂಲ್‍ನ ಪ್ರೌಢಶಾಲಾ ವಿಭಾಗದ ಆವರಣದಲ್ಲಿ ನಡೆಯಲಿದೆ.
