ಕೊಲ್ಲೂರು ದೇವಳದ ಅರ್ಚಕನಿಂದ ಸುಳ್ಳು ಆರೋಪ: ಮಾನನಷ್ಟ ಮೊಕದ್ದಮೆ ಹೂಡಲಾಗುವುದು – ಗೋಪಾಲ ಪೂಜಾರಿ

ಬೈಂದೂರು: ಶನಿವಾರ ವೈರಲ್ ಆದ ಕೊಲ್ಲೂರು ದೇವಸ್ಥಾನದ ಅರ್ಚಕ ಮಾತನಾಡಿದ್ದಾನೆನ್ನಲಾದ ಆಡಿಯೋ ರೆಕಾರ್ಡಿಂಗ್ ನಲ್ಲಿ ಸಂಪೂರ್ಣ ಸುಳ್ಳು ಆರೋಪಗಳಿವೆ ಎಂದು ಬೈಂದೂರು ಮಾಜಿ ಶಾಸಕ ಕೆ ಗೋಪಾಲ ಪೂಜಾರಿ ಹೇಳಿದ್ದಾರೆ. ಅಲ್ಲದೆ ಸುಳ್ಳು ಆರೋಪಗಳನ್ನು ಮಾಡಿರುವ ಅರ್ಚಕನ ವಿರುದ್ಧ ಕಾಂಗ್ರೆಸ್ ಪಕ್ಷದ ವತಿಯಿಂದ ಮಾನನಷ್ಟ ಮೊಕದ್ದಮೆ ಹೂಡಲಾಗುವುದು ಎಂದು ಹೇಳಿದ್ದಾರೆ.
ಬೈಂದೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಕೊಲ್ಲೂರು, ಶಂಕರನಾರಾಯಣ, ಕುಂದಾಪುರ ಸೇರಿದಂತೆ ಹಲವು ಪೊಲೀಸ್ ಠಾಣೆಗಳಲ್ಲಿ ದೂರು ದಾಖಲಾಗಿದೆ. ಉಡುಪಿಯ ಸೈಬರ್ ಕ್ರೈಂ ನಲ್ಲೂ ದೂರು ದಾಖಲಿಸಿದ ಬಳಿಕ ಉಪ ಮುಖ್ಯಮಂತ್ರಿಗಳ ಜೊತೆ ಮಾತುಕತೆ ನಡೆಸಿ ಕಾಂಗ್ರೆಸ್ ಪಕ್ಷದ ವತಿಯಿಂದ ಮಾನ ನಷ್ಟ ಮೊಕದ್ದಮೆ ಹೂಡಲಾಗುತ್ತದೆ ಎಂದು ತಿಳಿಸಿದರು
https://www.facebook.com/share/v/PkMbjTKWSemiCCRy/?mibextid=xfxF2i
