BlogAccidentCrime newsEducationHealthLocal newsNatureOthersTop StoriesTrending

ಕೊಲ್ಲೂರು: ಚಾಲಕನ ನಿಯಂತ್ರಣ ತಪ್ಪಿದ ಖಾಸಗೀ ಬಸ್ – ವಿದ್ಯಾರ್ಥಿಗಳಿಗೆ ಗಾಯ, ಪ್ರಯಾಣಿಕರು ಪಾರು

Aware others:

ಕುಂದಾಪುರ: ಶಿವಮೊಗ್ಗ ಕಡೆಯಿಂದ ಬೈಂದೂರು ಕಡೆಗೆ ಪ್ರಯಾಣಿಸುತ್ತಿದ್ದ ಖಾಸಗೀ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಚರಂಡಿಗಿಳಿದ ಘಟನೆ ಕೊಲ್ಲೂರು ಸಮೀಪದ ದಳಿ ಮುರ್ಕ್ಲು ಬಳಿ ಸೋಮವಾರ ಬೆಳಿಗ್ಗೆ ನಡೆದಿದೆ. ಶ್ರೀ ದುರ್ಗಾಂಬಾ  ಎಂಬ ಖಾಸಗೀ ಬಸ್ಸು ಸೋಮವಾರ ಬೆಳಿಗ್ಗೆ ಶಿವಮೊಗ್ಗದಿಂದ ಬೈಂದೂರಿಗೆ ಬರುತ್ತಿತ್ತು. ಬೆಳಿಗ್ಗೆ 8.45ರ ಸುಮಾರಿಗೆ ಕೊಲ್ಲೂರು ಸಮೀಪದ ದಳಿ ಮುರ್ಕ್ಲು ಬಳಿ  ನಿಯಂತ್ರಣ ತಪ್ಪಿ ರಸ್ತೆಯಿಂದ ಕೆಳಗೆ ಚರಂಡಿಗೆ ಇಳಿದು ಓರೆಯಾಗಿ ಮರಕ್ಕೆ ತಾಗಿ ನಿಂತಿದೆ.

ಬಸ್ಸಿನಲ್ಲಿ ಕೊಲ್ಲೂರು ಮೂಕಾಂಬಿಕ ಹೈಸ್ಕೂಲ್ ನ 6 ವಿದ್ಯಾರ್ಥಿಗಳು ಹಾಗೂ ಪಿಯುಸಿಯ 11 ವಿದ್ಯಾರ್ಥಿಗಳಿಗೆ ಗಾಯಗಳಾಗಿದ್ದು, ಕುಂದಾಪುರ ತಾಲೂಕು ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದಾರೆ. ಈ ಪೈಕಿ ಐವರು ವಿದ್ಯಾರ್ಥಿಗಳಿಗೆ ಮೂಳೆ ಮುರಿತವಾಗಿರುವ ಬಗ್ಗೆ ತಿಳಿದು ಬಂದಿದ್ದು, ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Aware others:

Leave a Reply

Your email address will not be published. Required fields are marked *

error: Content is protected !!