ಕುಂದಾಪುರ: ಆಗಸ್ಟ್ 1ರಂದು ಮಹಾಂತ ಶಿವಯೋಗಿಗಳ ಜನ್ಮದಿನಾಚರಣೆ ಪ್ರಯುಕ್ತ ವ್ಯಸನ ಮುಕ್ತ ದಿನಾಚರಣೆ
ಕುಂದಾಪುರ: ಸರ್ಕಾರದ ಅಧೀನ ಕಾರ್ಯದರ್ಶಿ, ಕನ್ನಡ, ಸಂಸ್ಕೃತಿ ಮತ್ತು ವಾರ್ತಾ ಇಲಾಖೆ ಆದೇಶದಂತೆ ಆಗಸ್ಟ್ 1ರಂದು ಬೆಳಿಗ್ಗೆ 10 ಗಂಟೆಗೆ ಡಾ. ಮಹಾಂತ ಶಿವಯೋಗಿಗಳ ಜನ್ಮದಿನಾಚರಣೆಯನ್ನು ತಾಲೂಕು ಪಂಚಾಯತ್ ಕಛೇರಿಯ ಸಾಮರ್ಥ್ಯ ಸೌಧದಲ್ಲಿ ತಾಲೂಕು ಮಟ್ಟದ ವ್ಯಸನಮುಕ್ತ ದಿನಾಚರಣೆ ನಡೆಸಲಾಗುವುದು ಎಂದು ಕುಂದಾಪುರ ತಹಸೀಲ್ದಾರ್ ಶೋಭಾಲಕ್ಷ್ಮೀ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
