ಗಂಗೊಳ್ಳಿ: ಆಗಸ್ಟ್4ರಂದು ಉಚಿತ ಆರೋಗ್ಯ ತಪಾಸಣೆ
ಕುಂದಾಪುರ : ಯೆನೆಪೋಯ ಮೆಡಿಕಲ್ ಕಾಲೇಜು ಆಸ್ಪತ್ರೆ ಮಂಗಳೂರು, ಜುಲೇಖಾ ಯೆನೆಪೋಯ ಇನ್ಸ್ಟಿಟ್ಯೂಟ್ ಆಫ್ ಒಂಕೋಲಜಿ ಮಂಗಳೂರು ಮತ್ತು ಸೋಶಿಯಲ್ ವೆಲ್ಫೇರ್ ಫೆಡರೇಶನ್ ಗಂಗೊಳ್ಳಿ ಇವರ ಜಂಟಿ ಆಶ್ರಯದಲ್ಲಿ ಗಂಗೊಳ್ಳಿಯ ತೌಹೀದ್ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಆಗಸ್ಟ್ 4ರಂದು ಬೆಳಿಗ್ಗೆ 9.30ರಿಂದ 1.30ರ ವರೆಗೆ ನಡೆಯಲಿದೆ.
ಶಿಬಿರದಲ್ಲಿ ಸಾಮಾನ್ಯ ವೈದ್ಯಕೀಯ ಪರೀಕ್ಷೆ, ನೇತ್ರ ತಪಾಸಣೆ, ದಂತ ತಪಾಸಣೆ, ಸ್ತ್ರೀ ರೋಗ ತಪಾಸಣೆ ಮೊದಲಾದ ಸೇವೆಯನ್ನು ನೀಡಲಾಗುತ್ತಿದ್ದು, ಸಾರ್ವಜನಿಕರು ಶಿಬಿರದ ಸದುಪಯೋಗ ಪಡೆದುಕೊಳ್ಳುವಂತೆ ಸಂಘಟಕರು ಕೋರಿದ್ದಾರೆ.
