ಪಶು ವೈದ್ಯರ ನೇಮಕಾತಿಯಲ್ಲಿ ಬೈಂದೂರಿಗೆ ತಾರತಮ್ಯ – ಹೋರಾಟದ ಎಚ್ಚರಿಕೆ ನೀಡಿದ ಶಾಸಕ ಗಂಟಿಹೊಳೆ
ಕುಂದಾಪುರ: ವಿಧಾನಮಂಡಲ ಅಧಿವೇಶನದಲ್ಲಿ ಬೈಂದೂರು ಕ್ಷೇತ್ರಕ್ಕೆ ಪಶುವೈದ್ಯರನ್ನು ನೇಮಿಸುವ ಭರವಸೆ ನೀಡಲಾಗಿದ್ದರೂ ಸರ್ಕಾರ ಕೊಟ್ಟ ಮಾತಿಗೆ ತಪ್ಪಿದೆ ಎಂದು ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಆರೋಪಿಸಿದ್ದಾರೆ. ರಾಜ್ಯ ಸರ್ಕಾರ ವಿವಿಧ ಜಿಲ್ಲೆಗಳಿಗೆ ಪಶು ವೈದ್ಯರನ್ನು ನೇಮಕ ಮಾಡುತ್ತಿದ್ದು, ಬೈಂದೂರು ತಾಲೂಕಿಗೆ ಇನ್ನೂ ಪಶುವೈದ್ಯರ ನೇಮಕ ಮಾಡದೆ ಇರುವ ರಾಜ್ಯ ಸರ್ಕಾರದ ಕ್ರಮವನ್ನು ಶಾಸಕರಾದ ಗುರುರಾಜ್ ಗಂಟಿಹೊಳೆಯವರು ತೀವ್ರವಾಗಿ ಖಂಡಿಸಿದ್ದಾರೆ.
ಪಶುವೈದ್ಯರಿಲ್ಲದ ಕಾರಣ ಬೈಂದೂರು ಕ್ಷೇತ್ರದ ಗ್ರಾಮೀಣ ಭಾಗದಲ್ಲಿ ಸಾಕಷ್ಟು ಸಮಸ್ಯೆಯಾಗುತ್ತಿದೆ. ಸರ್ಕಾರ ಈ ಕೂಡಲೇ ಬೈಂದೂರು ಕ್ಷೇತ್ರಕ್ಕೆ ಪಶುವೈದ್ಯರ ನೇಮಕ ಮಾಡಬೇಕು. ಈ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಪಶುಸಂಗೋಪನೆ ಇಲಾಖೆ ಸಚಿವರಿಗೂ ಗಮನಕ್ಕೆ ತಂದಿದ್ದೇನೆ. ಗ್ರಾಮೀಣ ಭಾಗದ ಸಮಸ್ಯೆ ಅರಿತು ಸಚಿವರ ಕೂಡಲೇ ಪಶುವೈದ್ಯಾಧಿಕಾರಿಗಳನ್ನು ನೇಮಿಸುವಂತೆ ಗಂಟಿಹೊಳೆ ಆಗ್ರಹಿಸಿದ್ದಾರೆ. ಇಲ್ಲವಾದರೆ ಉಗ್ರ ರೀತಿಯ ಹೋರಾಟವನ್ನು ರೂಪಿಸಲಾಗುತ್ತದೆ ಎಂದು ಅವರು ಎಚ್ಚರಿಕೆ ನೀಡಿದ್ದಾರೆ
