ಉಡುಪಿ: ಡಿ.ಡಿ. ರಿಪೋರ್ಟರ್ ಜಯಕರ ಸುವರ್ಣ ಇನ್ನಿಲ್ಲ!!





ಉಡುಪಿ: ದೂರದರ್ಶನ ಉಡುಪಿ ಜಿಲ್ಲಾ ವರದಿಗಾರ, ಕಲ್ಮಾಡಿ ನಿವಾಸಿ ಜಯಕರ್ ಸುವರ್ಣ ಅವರು ತಮ್ಮ ಸ್ವಗೃಹದಲ್ಲಿ ಹೃದಯಾಘಾತದಿಂದ ಸೋಮವಾರ ತಡರಾತ್ರಿ ನಿಧನ ಹೊಂದಿದರು. ಅವರಿಗೆ 69 ವರ್ಷ ವಯಸ್ಸಾಗಿತ್ತು. ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷರಾಗಿ, ಮಲ್ಪೆ ಬಿಲ್ಲವ ಸಂಘ, ಎಸ್.ಕೆ.ಪಿ.ಎ. ಸಹಿತ ಹಲವಾರು ಸಂಘ ಸಂಸ್ಥೆಗಳಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸಿದ್ದರು. ಪತ್ನಿ, ಮೂವರು ಮಕ್ಕಳು ಸೇರಿದಂತೆ ಅಪಾರ ಬಂಧುಗಳನ್ನು ಅಗಲಿದ್ದಾರೆ. ಅವರ ಕಲ್ಮಾಡಿಯ ಮನೆಯಲ್ಲಿ 10.30ರ ವರೆಗೆ ಅಂತಿಮ ದರ್ಶನಕ್ಕೆ ಏರ್ಪಾಡು ಮಾಡಲಾಗಿತ್ತು. ಬಳಿಕ ಅಂತ್ಯಕ್ರಿಯೆ ಗೆ ಸಕಲ ಸಿದ್ಧತೆಗಳು ನಡೆಯುತ್ತಿವೆ. ರಾಜಕೀಯ ಮುಖಂಡರಾದ ಪ್ರಸಾದ್ ಕಾಂಚನ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಬಿಜೆಪಿ ನಾಯಕಿ ಗೀತಾಂಜಲಿ ಸುವರ್ಣ, ಬಡಗುಬೆಟ್ಟು ಕ್ರೆಡಿಟ್ ಕೊ-ಅಪರೇಟಿವ್ ಸೊಸೈಟಿ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ಮೊದಲಾದವರು ಅಂತಿಮ ದರ್ಶನ ಪಡೆದಿದ್ದಾರೆ. ಜಿಲ್ಲಾ ಮಟ್ಟದ ಪತ್ರಕರ್ತರು, ಹಿರಿಯ ಮುಖಂಡರು, ಗಣ್ಯರು ಸಂತಾಪ ಸೂಚಿಸಿದ್ದಾರೆ.
