BlogEducationHealthLifestyleLocal newsNatureOthersTop StoriesTrending

ಕುಂದಾಪುರ: ರಕ್ತದಾನದಿಂದ ಆರೋಗ್ಯ ವೃದ್ಧಿ – ನಾರಾಯಣಗುರು ಯುವಕ ಮಂಡಲದಿಂದ ರಕ್ತದಾನ ಶಿಬಿರ

Aware others:


ಕುಂದಾಪುರ: ರಕ್ತದಾನ ಶ್ರೇಷ್ಠದಾನ. ರಕ್ತದಾನದಿಮದ ಬೇರೊಬ್ಬರ ಜೀವ ಉಳಿಸುವುದರ ಜೊತೆಗೆ ದಾನಿಗಳ ಆರೋಗ್ಯವೂ ವೃದ್ಧಿಸುತ್ತದೆ ಎಂದು ಕುಂದಾಪುರ ತಾಲೂಕು ಆರೋಗ್ಯ ಅಧಿಕಾರಿ ಡಾ. ಪ್ರೇಮಾನಂದ ಹೇಳಿದರು. ಅವರು ಶ್ರೀ ನಾರಾಯಣಗುರು ಯುವಕ ಮಂಡಲ (ರಿ) ಕುಂದಾಪುರ ಇವರ ಆಯೋಜನೆಯಲ್ಲಿ ಭಾರತೀಯ ರೆಡ್ ಕ್ರಾಸ್ ಸೊಸೈಟಿ ಕುಂದಾಪುರ ಇವರ ಸಹಕಾರದೊಂದಿಗೆ ನಡೆದ ಸ್ವಯಂಪ್ರೇರಿತ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.

ರಕ್ತದಾನ ಶಿಬಿರವನ್ನು ಡಾ. ಪ್ರೇಮಾನಂದ್ ಉದ್ಘಾಟಿಸಿದರು

ನಾರಾಯಣಗುರು ಯುವಕ ಮಂಡಲದ ಅಧ್ಯಕ್ಷರಾದ ಸಂದೇಶ್ ಪೂಜಾರಿ ಬೀಜಾಡಿ ಅಧ್ಯಕ್ಷತೆ ವಹಿಸಿದ್ದರು, ರೆಡ್ ಕ್ರಾಸ್ ಅಧ್ಯಕ್ಷ ಎಸ್ ಜಯಕರ್ ಶೆಟ್ಟಿ , ಬಿಲ್ಲವ ಸಂಘದ ಅಧ್ಯಕ್ಷ ಅಶೋಕ್ ಪೂಜಾರಿ ಬೀಜಾಡಿ, ಶ್ರೀ ನಾರಾಯಣಗುರು ಮಹಿಳಾ ಸಹಕಾರಿ ಸಂಘದ ಅಧ್ಯಕ್ಷೆ ಗುಣರತ್ನ ರಾಮ ಪೂಜಾರಿ, ಬಿಲ್ಲವ ಮಹಿಳಾ ಘಟಕದ ಅಧ್ಯಕ್ಷೆ ಗಿರಿಜಾ ಮಾಣಿ ಗೋಪಾಲ್ ಉಪಸ್ಥಿತರಿದ್ದರು. ಶ್ರೀ ನಾರಾಯಣಗುರು ಎಜುಕೇಶನ್ & ಕಲ್ಚರಲ್ ಟ್ರಸ್ಟ್ (ರಿ) ಕುಂದಾಪುರದ ಪ್ರಧಾನ ಕಾರ್ಯದರ್ಶಿ ಸ್ವಾಗತಿಸಿ ನಿರೂಪಿಸಿದರು. ಯುವಕ ಮಂಡಲದ ಕಾರ್ಯದರ್ಶಿ ರಮೇಶ್ ಮದ್ದುಗುಡ್ಡೆ ವಂದಿಸಿದರು.


Aware others:

Leave a Reply

Your email address will not be published. Required fields are marked *

error: Content is protected !!