ಗಂಗೊಳ್ಳಿ: ವಿವಿಧೆಡೆ ವರಮಹಾಲಕ್ಷ್ಮೀ ವೃತಾಚರಣೆ
ಕುಂದಾಪುರ: ಗಂಗೊಳ್ಳಿಯ ವಿವಿಧೆಡೆ ಶ್ರೀ ವರಮಹಾಲಕ್ಷ್ಮೀ ವೃತಾಚರಣೆಯನ್ನು ಭಕ್ತಿ ಶ್ರದ್ಧಾಪೂರ್ವಕ ಸರಳವಾಗಿ ವಿಜೃಂಭಣೆಯಿಂದ ಶುಕ್ರವಾರ ಆಚರಿಸಲಾಯಿತು.

ಗಂಗೊಳ್ಳಿಯ ಸೇವಾ ಸಂಘ ಸಾರ್ವಜನಿಕ ಶ್ರೀ ಶಾರದೋತ್ಸವ ಮಹಿಳಾ ಸಂಘದ ವತಿಯಿಂದ ಗಂಗೊಳ್ಳಿಯ ಶ್ರೀ ಶಾರದಾ ಮಂಟಪದಲ್ಲಿ ಶ್ರೀ ವರಮಹಾಲಕ್ಷ್ಮೀ ವೃತವನ್ನು ಆಚರಿಸಲಾಯಿತು. ಪುರೋಹಿತರಾದ ಜಿ.ರಾಘವೇಂದ್ರ ಆಚಾರ್ಯ ನೇತೃತ್ವದಲ್ಲಿ ಧಾರ್ಮಿಕ ವಿಧಿವಿಧಾನಗಳು ನಡೆಯಿತು. ಮಹಿಳಾ ಸಂಘದ ಅಧ್ಯಕ್ಷೆ ಸವಿತಾ ಉಮಾನಾಥ ದೇವಾಡಿಗ ಹಾಗೂ ಕಾರ್ಯದರ್ಶಿ ಸುಜಾತಾ ಬಾಬು ಖಾರ್ವಿ, ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಗಂಗೊಳ್ಳಿಯ ಕಲೈಕಾರ ಮಠ ಶ್ರೀ ನಗರ ಮಹಾಕಾಳಿ ಮತ್ತು ಕಲ್ಲುಕುಟ್ಟಿಗ ದೇವಸ್ಥಾನ ನಡೆದ ಶ್ರೀ ವರಮಹಾಲಕ್ಷ್ಮೀ ವೃತಾಚರಣೆಯಲ್ಲಿ ಮುತ್ತೈದೆಯರು, ಸುಮಂಗಲಿಯರು ಪಾಲ್ಗೊಂಡು ಶ್ರೀದೇವರ ಪ್ರಸಾದ ಸ್ವೀಕರಿಸಿದರು. ಗಂಗೊಳ್ಳಿಯ ವಿವಿಧ ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮೀ ವೃತಾಚರಣೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ನಡೆಯಿತು.
