BlogHighlightsLifestyleLocal newsOthersReligionTop StoriesTrending

ಗಂಗೊಳ್ಳಿ: ಜಿ.ಎಸ್.ಬಿ. ಮಹಿಳಾ ಮಂಡಳಿಯಲ್ಲಿ ವರಮಹಾಲಕ್ಷ್ಮೀ ವೃತ

Aware others:

ಕುಂದಾಪುರ: ಜಿ.ಎಸ್.ಬಿ. ಮಹಿಳಾ ಮಂಡಳಿ ಗಂಗೊಳ್ಳಿ ಇವರ ವತಿಯಿಂದ ಶ್ರೀ ವರಮಹಾಲಕ್ಷ್ಮೀ ವೃತ ಶ್ರೀ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಾಧೀಶ ಶ್ರೀಮದ್ ವಿದ್ಯಾಧೀಶ ತೀರ್ಥ ಶ್ರೀಪಾದ ವಡೇರ ಸ್ವಾಮೀಜಿಯವರ ಆಶೀರ್ವಾದ, ಮಾರ್ಗದರ್ಶನದಲ್ಲಿ ಗಂಗೊಳ್ಳಿಯ ಮಲ್ಯರಮಠ ಶ್ರೀ ವೆಂಕಟರಮಣ ದೇವಸ್ಥಾನದ ವಿದ್ಯಾಧಿರಾಜ ಸಭಾಭವನದಲ್ಲಿ ಶುಕ್ರವಾರ ಜರಗಿತು.

ಜಿ.ಎಸ್.ಬಿ. ಮಹಿಳಾ ಮಂಡಳಿ ಗಂಗೊಳ್ಳಿ ಇವರ ವತಿಯಿಂದ ಶ್ರೀ ವರಮಹಾಲಕ್ಷ್ಮೀ ವೃತ

ದೇವಳದ ತಾಂತ್ರಿಕ ಜಿ.ವಸಂತ ಭಟ್ ನೇತೃತ್ವದಲ್ಲಿ ವರಮಹಾಲಕ್ಷ್ಮೀ ವೃತದ ಧಾರ್ಮಿಕ ವಿಧಿವಿಧಾನಗಳು ಶಾಸ್ತ್ರೋಕ್ತವಾಗಿ ವಿಜೃಂಭಣೆಯಿಂದ ನಡೆಯಿತು. ಜಿಎಸ್‌ಬಿ ಸಮಾಜದ ಮುತ್ತೈದೆಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಶ್ರೀದೇವರ ಪ್ರಸಾದ ಸ್ವೀಕರಿಸಿದರು.

ಜಿ.ಎಸ್.ಬಿ. ಮಹಿಳಾ ಮಂಡಳಿ ಗಂಗೊಳ್ಳಿ ಇವರ ವತಿಯಿಂದ ಶ್ರೀ ವರಮಹಾಲಕ್ಷ್ಮೀ ವೃತ

ದೇವಳದ ಪ್ರಧಾನ ಅರ್ಚಕ ಎಸ್.ವೆಂಕಟರಮಣ ಆಚಾರ್ಯ, ದೇವಳದ ಆಡಳಿತ ಮೊಕ್ತೇಸರ ಎನ್.ಸದಾಶಿವ ನಾಯಕ್, ಜಿ.ವೆಂಕಟೇಶ ನಾಯಕ್, ಜಿಎಸ್‌ಬಿ ಮಹಿಳಾ ಮಂಡಳಿ ಅಧ್ಯಕ್ಷೆ ನಿರ್ಮಲಾ ಡಿ.ನಾಯಕ್, ಕಾರ್ಯದರ್ಶಿ ವಿಜಯಶ್ರೀ ವಿ.ಆಚಾರ್ಯ, ಪುರೋಹಿತರು, ದೇವಸ್ಥಾನದ ಆಡಳಿತ ಮಂಡಳಿ ಸದಸ್ಯರು, ಜಿಎಸ್‌ಬಿ ಮಹಿಳಾ ಮಂಡಳಿ ಪದಾಧಿಕಾರಿಗಳು, ಸದಸ್ಯರು, ಸಮಾಜಬಾಂಧವರು, ಊರಿನ ಹತ್ತು ಸಮಸ್ತರು, ಮತ್ತಿತರರು ಉಪಸ್ಥಿತರಿದ್ದರು.


Aware others:

Leave a Reply

Your email address will not be published. Required fields are marked *

error: Content is protected !!