ಗಂಗೊಳ್ಳಿ : ವೃತ್ತ ಮಟ್ಟದ ಕಬ್ಬಡಿ ಪಂದ್ಯಾಟ
ಕುಂದಾಪುರ: ಶಾಲಾ ಶಿಕ್ಷಣ ಇಲಾಖೆ, ಉಪನಿರ್ದೇಶಕರ ಕಛೇರಿ ಉಡುಪಿ ಜಿಲ್ಲೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಕುಂದಾಪುರ ಹಾಗೂ ಸರಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆ ಗಂಗೊಳ್ಳಿ ಇವರ ಜಂಟಿ ಆಶ್ರಯದಲ್ಲಿ ಪ್ರಾಥಮಿಕ ಶಾಲಾ ಬಾಲಕ-ಬಾಲಕಿಯರ ಕುಂದಾಪುರ ವೃತ್ತ ಮಟ್ಟದ ಕಬ್ಬಡಿ ಪಂದ್ಯಾಟ ಗಂಗೊಳ್ಳಿಯ ಸರಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯ ಕ್ರೀಡಾಂಗಣದಲ್ಲಿ ಮಂಗಳವಾರ ನಡೆಯಿತು.

ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ಮೌಲಾನಾ ಅಬ್ದುಲ್ ಹಾದಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮಕ್ಕಳ ಹಕ್ಕುಗಳ ಸಾಮಾಜಿಕ ಕಾರ್ಯಕರ್ತೆ ತಿಲೋತ್ತಮ ನಾಯಕ್ ಪಂದ್ಯಾಟ ಉದ್ಘಾಟಿಸಿ ಶುಭ ಹಾರೈಸಿದರು. ಗಂಗೊಳ್ಳಿ ಕ್ಲಸ್ಟರ್‌ನ ಸಿಆರ್‌ಪಿ ಪ್ರದೀಪ ಕುಮಾರ್ ಶೆಟ್ಟಿ, ಶಾಲೆಯ ಹಳೆ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷ ಶಾಬುದ್ದೀನ್ ಅವೂಫ್, ಎಸ್‌ಡಿಎಂಸಿ ಮಾಜಿ ಅಧ್ಯಕ್ಷ ಮಹಮ್ಮದ್ ನೂರ್ ಫಾಜಿಲ್, ನಾಕುದಾ ಮೊಹಮ್ಮದ್ ಅಶ್ರಫ್, ಶಾಬುದ್ದೀನ್ ಮೊಹಮ್ಮದ್ ಮೀರಾನ್, ಗಂಗೊಳ್ಳಿ ಜಾಮೀಯಾ ಮಸೀದಿ ಅಧ್ಯಕ್ಷ ಮಹಮ್ಮದ್ ಹನೀಫ್ ಮೊದಲಾದವರು ಉಪಸ್ಥಿತರಿದ್ದರು.
ಶಾಲೆಯ ಪ್ರಭಾರ ಮುಖ್ಯ ಶಿಕ್ಷಕಿ ಹೇಮಾವತಿ ಸ್ವಾಗತಿಸಿದರು. ಕೊಂಚಾಡಿ ರಾಧಾ ಶೆಣೈ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಶಶಿಶಂಕರ ಎಚ್.ಎಂ. ಕಾರ್ಯಕ್ರಮ ನಿರ್ವಹಿಸಿದರು. ಸಹ ಶಿಕ್ಷಕಿ ಸುಮತಿ ವಂದಿಸಿದರು.