ಮರವಂತೆ: ಅಂಚೆ ಕಚೇರಿ ದರೋಡೆ ಯತ್ನದ ಆರೋಪಿಗಳ ಬಂಧನ

ಕುಂದಾಪುರ : ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಮರವಂತೆ ಗ್ರಾಮದಲ್ಲಿ ಅಂಚೆ ಕಛೇರಿ ಕಳ್ಳತನ ಪ್ರಕರಣಕ್ಕೆ ಭಾಗಿಯಾದ ಆರೋಪಿಗಳನ್ನು ಗಂಗೊಳ್ಳಿ ಪೊಲೀಸರು ಬಂಧಿಸಿದ್ದಾರೆ.
ಸಿ.ಸಿ ಕ್ಯಾಮರಾದ ಪೂಟೇಜ್‌ನ ಆಧಾರದ ಮೇಲೆ ಗಂಗೊಳ್ಳಿ ಪೊಲೀಸ್ ಠಾಣಾ ಉಪನಿರೀಕ್ಷಕರಾದ ಹರೀಶ್ ಆರ್. ಮತ್ತು ಬಸವರಾಜ ಕನಶೆಟ್ಟಿ ಹಾಗೂ ಸಿಬ್ಬಂದಿಗಳಾದ ಸಂದೀಪ ಕುರಾಣಿ, ರಾಜು ನಾಯ್ಕ, ನಾಗರಾಜ ಹಾಗೂ ದಿನೇಶ್ ಅವರನ್ನೊಳಗೊಂಡ ತಂಡ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕು ಭಟ್ಕಳ ಜಾಲಿ ರಸ್ತೆ ಕ್ರಾಸ್ ಎಂಬಲ್ಲಿ ಮಂಗಳವಾರ ಭಟ್ಕಳದ ನಿವಾಸಿ ಪೌಜಾನ್ ಅಹಮ್ಮದ್(೧೯) ಹಾಗೂ ಇನ್ನೊರ್ವ ಕಾನೂನು ಸಂಘ?ಕ್ಕೊಳಗಾದ ಬಾಲಕನನ್ನು ವಶಕ್ಕೆ ಪಡೆದು ವಿಚಾರಿಸಿದಾಗ ಕೃತ್ಯ ಎಸಗಿರುವುದನ್ನು ಬೆಳಕಿಗೆ ಬಂದಿದೆ. ಆರೋಪಿಗಳು ಕೃತ್ಯಕ್ಕೆ ಬಳಸಿದ ಬೈಕ್‌ನ್ನು ವಶಪಡಿಸಿಕೊಂಡು ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.