ಕುಂದಾಪುರ: ಚಡ್ಡಿ ಬನಿಯನ್ ನಲ್ಲಿ ತಿರುಗಾಡುತ್ತಿದ್ದ ಅನುಮಾನಾಸ್ಪದ ವ್ಯಕ್ತಿ ಪೊಲೀಸ್ ವಶಕ್ಕೆ!
ಕುಂದಾಪುರ: ಇಲ್ಲಿನ ಕೋಡಿಯಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ಚಡ್ಡಿ ಮತ್ತು ಬನಿಯನ್ ಧರಿಸಿ ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದು, ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದ್ದಲ್ಲದೆ ಸಾರ್ವಜನಿಕರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಮೂರ್ನಾಲ್ಕು ದಿನಗಳ ಹಿಂದೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಕುಂದಾಪುರ ತಾಲೂಕಿನ ಕೋಡಿ ಭಾಗದ ಫಿಶರೀಸ್ ಏರಿಯಾದಲ್ಲಿ ಈ ಘಟನೆ ನಡೆದಿದ್ದು, ಸುಮಾರು 30 ರಿಂದ 35 ವರ್ಷ ವಯಸ್ಸಿನ ಯುವಕ ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದ ಎನ್ನಲಾಗಿದೆ. ಇದನ್ನು ಗಮನಿಸಿದ ಸ್ಥಳೀಯರು ಆತನನ್ನು ವಿಚಾರಿಸಿದಾಗ ಸರಿಯಾದ ಉತ್ತರ ನೀಡದೆ ಇದ್ದ ಕಾರಣ ಅನುಮಾನಗೊಂಡ ಸ್ಥಳೀಯರು ಆತನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.
ಮೂರ್ನಾಲ್ಕು ದಿನಗಳ ಹಿಂದೆ ತಡರಾತ್ರಿಯಲ್ಲಿ ಬಿಳಿ ಬನಿಯನ್ ಮತ್ತು ಚಡ್ಡಿ ಯಲ್ಲಿ ಓಡಾಡುತ್ತಿದ್ದ ಈ ವ್ಯಕ್ತಿ ಯಾವುದೋ ಚಡ್ಡಿ ಗ್ಯಾಂಗಿನ ಸದಸ್ಯ ಇರಬಹುದು ಎಂದು ಸ್ಥಳೀಯರು ಊಹಿಸಿದ್ದರು. ಅಲ್ಲದೆ ಅನುಮಾನಾಸ್ಪದವಾಗಿ ತಿರುಗಾಡುತ್ತಿರುವುದರಿಂದ ಕಳ್ಳತನಕ್ಕೆ ಯತ್ನಿಸುತ್ತಿರಬಹುದು ಎಂದು ಭಾವಿಸಿದ್ದರು. ಪೊಲೀಸರು ಘಟನಾ ಸ್ಥಳಕ್ಕೆ ಬಂದು ಅನುಮಾನ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಈ ಬಗ್ಗೆ ವಶಕ್ಕೆ ಪಡೆದುಕೊಳ್ಳಲಾದ ವ್ಯಕ್ತಿಯು ಉತ್ತರ ಪ್ರದೇಶ ಮೂಲದ ಮಾನಸಿಕ ಅಸ್ವಸ್ಥನಾಗಿದ್ದು, ಮಧ್ಯ ಸೇವನೆ ಮಾಡಿದ್ದ ಎಂದು ತಿಳಿದು ಬಂದಿದೆ. ರಾತ್ರಿ ಸಮುದ್ರದಲ್ಲಿ ಬಿದ್ದು ಎದ್ದು ಬಳಿಕ ಅಲ್ಲೇ ಸಮೀಪದ ಮನೆಯೊಂದರ ಬಾಗಿಲು ತಟ್ಟಿದ್ದ ಎನ್ನಲಾಗಿದೆ. ಈ ಬಗ್ಗೆ ಯಾವುದೇ ಪ್ರಕರಣ ದಾಖಲಾಗಿಲ್ಲ.
ವಿಡಿಯೋ ನೋಡಲು ಇಲ್ಲಿ ಕ್ಲಿಕ್ಕಿಸಿ
https://www.facebook.com/share/v/Qdu18Q1qKCxFe2v6/?mibextid=oFDknk