BlogCrime newsHighlightsHuman storiesLocal newsOthersPoliticsState newsTop StoriesTrending

ಬೈಂದೂರು ಮಾಜೀ ಶಾಸಕ ಕೆ. ಲಕ್ಷ್ಮೀನಾರಾಯಣ ನಿಧನ

Aware others:

ಕುಂದಾಪುರ : ಬೈಂದೂರಿನ ಮಾಜಿ ಶಾಸಕ, ಉದ್ಯಮಿ, ಇಂಜಿನಿಯರ್  ಕೆ. ಲಕ್ಷ್ಮೀ ನಾರಾಯಣ ಅವರು ಸೆಪ್ಟಂಬರ್ 27ರ ಶುಕ್ರವಾರ ಬೆಳಿಗ್ಗೆ ಬೆಂಗಳೂರಿನಲ್ಲಿ ನಿಧನರಾದರು. ಅವರಿಗೆ 85 ವರ್ಷ ವಯಸ್ಸಾಗಿತ್ತು.

ಕೆಲಸ ವರ್ಷಗಳಿಂದ ಬೆಂಗಳೂರಿನಲ್ಲಿಯೇ ವಾಸವಿದ್ದ ಮಾಜೀ ಶಾಸಕ ಕೆ ಲಕ್ಷ್ಮಿನಾರಾಯಣ ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ನೇರ ನಡೆನುಡಿಗಳಿಗಳಿಗೆ ಹೆಸರಾಗಿದ್ದ ಅವರು 2008ರಿಂದ ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಒಂದು ಅವಧಿಗೆ ಶಾಸಕರಾಗಿದ್ದರು. ಮೂರು ಬಾರಿ ಬಾರಿ ಸ್ಫರ್ಧಿಸಿದ ಅವರು ಎರಡು ಬಾರಿ ಪರಾಜಯ ಕಂಡಿದ್ದರು.

ರಾಮಕ್ಷತ್ರತ್ರಿಯ ಸಂಘ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರೀಯರಾಗಿದ್ದರು. ಮೃತರು ಓರ್ವ ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ. ಅಂತಿಮ ದರ್ಶನಕ್ಕಾಗಿ ಬೆಂಗಳೂರಿನ ಡಾಲರ್ ಕಾಲನಿಯಲ್ಲಿರುವ ಮನೆಯಲ್ಲಿ ಬೆಳಗ್ಗೆ 10.30 ರಿಂದ ವ್ಯವಸ್ಥೆ ಮಾಡಲಾಗಿದೆ. ಸಂಜೆ 4.30ಕ್ಕೆ ಬನಶಂಕರಿಯ ಚಿತಾಗಾರದಲ್ಲಿ ಅಂತ್ಯ ಸಂಸ್ಕಾರ ನೆರವೇರಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.


Aware others:

Leave a Reply

Your email address will not be published. Required fields are marked *

error: Content is protected !!