AccidentBlogCrime newsEducationGovernmentHighlightsLifestyleLocal newsObituaryState newsTop StoriesTrending

ಕೋಟೇಶ್ವರ: ನಡೆದು ಸಾಗುತ್ತಿದ್ದ ಕಾಲೇಜು ವಿದ್ಯಾರ್ಥಿಗೆ ಟಿಪ್ಪರ್ ಡಿಕ್ಕಿ : ಬಿಎಸ್ಸಿ ವಿದ್ಯಾರ್ಥಿ ಸಾವು

Aware others:

ಕುಂದಾಪುರ: ಕಾಲೇಜು ಮುಗಿಸಿ ಸ್ನೇಹಿತರೊಂದಿಗೆ ಫುಟ್ಪಾತಿನ ಇಂಟರ್ ಲಾಕ್ ಮೇಲೆ ನಡೆದುಕೊಂಡು ಹೋಗುತ್ತಿದ್ದ ವಿದ್ಯಾರ್ಥಿಗೆ ಹಿಂದಿನಿಂದ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಕೋಟೇಶ್ವರ ಪ್ರಥಮ ದರ್ಜೆ ಕಾಲೇಜು ಸಮೀಪ ಕೋಟೇಶ್ವರ ಹಾಲಾಡಿ ರಸ್ತೆಯ ಕಾಗೇರಿ ಎಂಬಲ್ಲಿ ಮಂಗಳವಾರ (ಇಂದು) ನಡೆದಿದೆ. ಅಪಘಾತದಲ್ಲಿ ಸಾವನ್ನಪ್ಪಿದ ವಿದ್ಯಾರ್ಥಿಯನ್ನು ನಾಗೂರು ಕೋಯನಗರ ನಿವಾಸಿ ಉಮೇಶ್ ಅಮೀನ್ ಹಾಗೂ ನಾಗರತ್ನ ದಂಪತಿಗಳ ಪುತ್ರ, ಪ್ರಸ್ತುತ ಕೋಟೇಶ್ವರದ ಕಾಳಾವರ ವರದರಾಜ ಶೆಟ್ಟಿ ಸರ್ಕಾರೀ ಪ್ರಥಮ ದರ್ಜೆ ಕಾಲೇಜಿನ ಪ್ರಥಮ ಬಿಎಸ್ಸಿ ವಿದ್ಯಾರ್ಥಿ ಧನುಷ್ ಎಂದು ಗುರುತಿಸಲಾಗಿದೆ.

ಧನುಷ್ ತನ್ನ ಇಬ್ಬರು ಸ್ನೇಹಿತರೊಂದಿಗೆ ಕಾಲೇಜು ಮುಗಿಸಿ ಕೋಟೇಶ್ವರದತ್ತ ರಸ್ತೆ ಬದಿಯ ಇಂಟರ್ ಲಾಕ್  ಮೇಲೆ ನಡೆದುಕೊಂಡು ಬರುತ್ತಿದ್ದ. ಅತೀ ವೇಗವಾಗಿ ಹಿಂದಿನಿಂದ ಬಂದ ಶ್ರೀ ಮಹಾಗಣಪತಿ ಪ್ರಸನ್ನ ಎಂಬ ಹೆಸರಿನ ಟಿಪ್ಪರ್  ಎದುರಿನಿಂದ ಬರುತ್ತಿದ್ದ ಕಾರನ್ನು ತಪ್ಪಿಸಲು ತೀರಾ ಬಲಬದಿಗೆ ಬಂದು ಧನುಷ್ ನ ಹಿಂಭಾಗಕ್ಕೆ  ಡಿಕ್ಕಿ ಹೊಡೆದಿದೆ. ಅಪಘಾತದ ಪರಿಣಾಮ ಧನುಷ್ ಲಾರಿಯಡಿಗೆ ಬಿದ್ದು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ.

ಧನುಷ್ ತನ್ನ ತಾಯಿಯೊಂದಿಗೆ ನಾಗೂರಿನಲ್ಲಿ ವಾಸಮಾಡುತ್ತಿದ್ದ. ತಂದೆ ಬಾರ್ಕೂರಿನಲ್ಲಿ ಕೆಲಸ ಮಾಡಿಕೊಂಡಿದ್ದಾರೆ. ಮಂಗಳವಾರ ಮಧ್ಯಾಹ್ನ ಕಾಲೇಜು ಮುಗಿಸಿ ಧನುಷ್ ಮನೆಗೆ ವಾಪಾಸ್ಸಾಗುತ್ತಿದ್ದ ವೇಳೆ ಘಟನೆ ನಡೆದಿದೆ. ಕಾಲೇಜಿನ ಪ್ರಾಂಶುಪಾಲ ಡಾ. ರಾಜೇಂದ್ರ ನಾಯಕ್ ಹಾಗೂ ಇತರ ಉಪನ್ಯಾಸಕರು ಸ್ಥಳಕ್ಕೆ ಧಾವಿಸಿದ್ದು, ಮುಂದಿನ ಪ್ರಕ್ರಿಯೆಗಳನ್ನು ನಡೆಸುತ್ತಿದ್ದಾರೆ. ಅಪಘಾತದ ದೃಶ್ಯ ಎದುರುಗಡೆ ಬರುತ್ತಿದ್ದ ಕಾರಿನ ಡ್ಯಾಶ್ ಕ್ಯಾಮೆರಾದಲ್ಲಿ ರೆಕಾರ್ಡ್ ಆಗಿದ್ದು, ಎಲ್ಲೆಡೆ ವೈರಲ್ ಆಗುತ್ತಿದೆ. ಇದೀಗ ಟಿಪ್ಪರ್ ಗೆ ಅಡ್ಡ ಬಂದು ಅಪಘಾತಕ್ಕೆ ಕಾರಣವಾದ ಕಾರ್ ಚಾಲಕನ ವಿರುದ್ಧವೂ ಪ್ರಕರಣ ದಾಖಲಿಸಬೇಕು ಎನ್ನುವ ಆಗ್ರಹ ಕೇಳಿ ಬರುತ್ತಿದೆ. ಕುಂದಾಪುರ ಸಂಚಾರೀ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಅಪಘಾತದ ವಿಡಿಯೋ ವೀಕ್ಷಿಸಲು ಇಲ್ಲಿ ಕ್ಲಿಕ್ಕಿಸಿ


Aware others:

Leave a Reply

Your email address will not be published. Required fields are marked *

error: Content is protected !!