ಕುಂದಾಪುರ: ತಾಲ್ಲೂಕು ಕಛೇರಿ ಆವರಣದಲ್ಲಿ ಸ್ವಚ್ಚತಾ ಹಿ ಸೇವಾ ಅಭಿಯಾನ


ಕುಂದಾಪುರ: ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ (ರಿ) ಅಭಿಯೋಗ ಇಲಾಖೆ ಮತ್ತು ತಾಲೂಕು ಆಡಳಿತ ಹಾಗೂ ಪುರಸಭೆ ಕುಂದಾಪುರ ಮತ್ತು ಭಾರತೀಯ ರೆಡ್ ಕ್ರಾಸ್ ಸೊಸೈಟಿ ಕುಂದಾಪುರ ಇವರ ಸಂಯುಕ್ತ ಆಶ್ರಯದಲ್ಲಿ ಕುಂದಾಪುರ ತಾಲೂಕು ಕಛೇರಿಯ ಆವರಣದಲ್ಲಿ ಸ್ವಚ್ಛತಾ ಹಿ ಸೇವಾ ಅಭಿಯಾನ ಕಾರ್ಯಕ್ರಮ ಮಂಗಳವಾರ ಬೆಳಿಗ್ಗೆ ನಡೆಯಿತು.


ಬಳಿಕ ಸ್ವಚ್ಛತಾ ಅರಿವು ಕಾರ್ಯಕ್ರಮ ಮತ್ತು ಹಿರಿಯ ನಾಗರಿಕರ ದಿನಾಚರಣೆಯನ್ನು ಕುಂದಾಪುರದ ಹಿರಿಯ ಸಿವಿಲ್ ನ್ಯಾಯಾಧೀಶ ರಾಜು.ಎನ್ ಉದ್ಘಾಟಿಸಿದರು. ಕುಂದಾಪುರ ಸಹಾಯಕ ಆಯುಕ್ತ ಮಹೇಶ್ಚಂದ್ರ ಕೆ. ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಪ್ರಧಾನ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಧೀಶೆ ಮಂಜುಳಾ ಬಿ, ಕುಂದಾಪುರ ತಹಶೀಲ್ದಾರ್ ಶೋಭಾಲಕ್ಷ್ಮೀ ಹೆಚ್.ಎಸ್, ಕುಂದಾಪುರ ವಕೀಲರ ಸಂಘದ ಅಧ್ಯಕ್ಷ ಹಂದಟ್ಟು ಪ್ರಮೋದ ಹಂದೆ, ಕುಂದಾಪುರ ಪುರಸಭೆ ಮುಖ್ಯಾಧಿಕಾರಿ ಶ್ರೀ ಆನಂದ ಜಿ, ಸಹಾಯಕ ಸರಕಾರಿ ಅಭಿಯೋಜಕ ಉದಯ ಕುಮಾರ್ ಬಿ. ಎ, ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ, ಗಿಳಿಯಾರು ಪ್ರಕಾಶ್ಚಂದ್ರ ಶೆಟ್ಟಿ, ರೆಡ್ ಕ್ರಾಸ್ ಸೊಸೈಟಿಯ ಛೇರ್ ಮೆನ್ ಎಸ್ ಜಯಕರ ಶೆಟ್ಟಿ, ಹಿರಿಯ ನಾಗರಿಕ ವೇದಿಕೆಯ ಅಧ್ಯಕ್ಷ ಸದಾನಂದ ಶೆಟ್ಟಿ, ಹಿರಿಯ ನಾಗರಿಕ ವೇದಿಕೆಯ ಸದಸ್ಯರು, ಹಾಗೂ ತಾಲೂಕು ಕಛೇರಿಯ ಸಿಬ್ಬಂಧಿ ವರ್ಗದವರು ಉಪಸ್ಥಿತರಿದ್ದರು. ಉಪತಹಶೀಲ್ದಾರ್ ವಿನಯ್ ಎಸ್ ವಿ ನಿರ್ವಹಿಸಿದರು.
