BlogCulturalEconomyFashionHighlightsHuman storiesLifestyleLocal newsOthersState newsSuccess storiesTop StoriesWomen Care

ಕೋಟ: ಪಂಚವರ್ಣ ರಾಜ್ಯೋತ್ಸವ ಪ್ರಶಸ್ತಿಗೆ ಉದ್ಯಮಿ ಡಾ.ವಿಜಯ ಸಂಕೇಶ್ವರ್ ಆಯ್ಕೆ

Aware others:

ಕೋಟ: ಈ ಬಾರಿಯ ಪಂಚವರ್ಣ ರಾಜ್ಯೋತ್ಸವ ಪ್ರಶಸ್ತಿಗೆ ಉದ್ಯಮಿ ಡಾ.ವಿಜಯ ಸಂಕೇಶ್ವರ್ ಆಯ್ಕೆಯಾಗಿದ್ದಾರೆ ಎಂದು ಕೋಟದ ಪಂಚವರ್ಣ ಸಂಸ್ಥೆಯ ಅಧ್ಯಕ್ಷ ಅಜಿತ್ ಆಚಾರ್ ಹಾಗೂ ಸ್ಥಾಪಾಕಾಧ್ಯಕ್ಷ ಶೇವಧಿ ಸುರೇಶ್ ಗಾಣಿಗ ಜಂಟೀ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಸದ್ಭಾವನಾ 2024 ಎಂಬ ಶೀರ್ಷಿಕೆಯಡಿ ಪಂಚವರ್ಣ ಯುವಕ ಮಂಡಲ ಕೋಟ ಹಾಗೂ ಅಧೀನ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ನಡೆಯುವ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ರಾಜ್ಯ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಸಾಧನೆಗೈದ ಸಾಧಕರಿಗೆ ಪಂಚವರ್ಣ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡುತ್ತಿದ್ದು, ಈ ಬಾರಿ ನವೆಂಬರ್ 16ರಂದು ಕೋಟದ ಗಾಂಧಿ ಮೈದಾನದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.

ಕನ್ನಡ ನಾಡು ಕಂಡ ಶ್ರೇಷ್ಠ ಉದ್ಯಮಿ ಪದ್ಮಶ್ರೀ ಪುರಸ್ಕೃತ ಡಾ.ವಿಜಯ ಸಂಕೇಶ್ವರ ರವರಿಗೆ ಗಣ್ಯರ ಸಮ್ಮುಖದಲ್ಲಿ ಪ್ರಶಸ್ತಿ ಪ್ರದಾನ ಮಾಡಲಿದೆ. ಪ್ರಶಸ್ತಿಯು 20ಸಾವಿರ ಮೌಲ್ಯದ ಬೆಳ್ಳಿ ಫಲಕ, ನಗದು ಒಳಗೊಂಡಿದೆ. ಇದೇ ವೇಳೆ ಸ್ಥಳೀಯ ಸಾಧಕರಿಗೆ ವಿಶೇಷ ಅಭಿನಂದನೆಯನ್ನು ಸಲ್ಲಿಸಲಿದ್ದು , ವಿಶೇಷ ಪುರಸ್ಕಾರಕ್ಕೆ ಪರಿಸರ ಸ್ನೇಹಿ ಸಂಘಟನೆ ಸ್ವಚ್ಛ ಬ್ರಿಗೇಡ್ ಕಾರ್ಕಳ ತಂಡ ಆಯ್ಕೆಯಾಗಿದೆ. ಅಲ್ಲದೇ ಪ್ರತಿಭಾ ಪುರಸ್ಕಾರ, ಅಶಕ್ತರಿಗೆ, ಅನಾರೋಗ್ಯ ಪೀಡಿತರಿಗೆ, ವಿದ್ಯಾರ್ಥಿವೇತನ, ಸ್ಥಳೀಯ ಅಂಗನವಾಡಿಗೆ ಸಮವಸ್ತ್ರ , ಕನ್ನಡ ಮಾಧ್ಯಮ ಸರಕಾರಿ ಶಾಲೆಗಳಿಗೆ ದತ್ತಿನಿಧಿ ಸೇರಿದಂತೆ ವಿವಿಧ ಸಮಾಜಮುಖಿ ಕಾರ್ಯಕ್ರಮಗಳು ನಡೆಯಲಿವೆ

ವಿಶೇಷ ಆಹ್ವಾನಿತರಾಗಿ ಕನ್ನಡ ಚಿತ್ರರಂಗದ ಶ್ರೇಷ್ಟ ನಟ ಎಸ್ ದೊಡ್ಡಣ್ಣ, ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಉಪಸ್ಥಿತರಿರಲಿದ್ದಾರೆ. ಸಾಂಸ್ಕೃತಿಕ ಕಾರ್ಯಕ್ರಮದ ಭಾಗವಾಗಿ ಮಯೂರಿ ನೃತ್ಯ ತಂಡ ಕುಂಭಾಶಿ, ಸ್ಥಳೀಯ ಅಂಗನವಾಡಿ ಪುಟಾಣಿಗಳಿಂದ ನೃತ್ಯ, ಅವಿಭಜಿತ ಜಿಲ್ಲೆಗಳ ಪ್ರಸಿದ್ಧ ನಾಟಕ ತಂಡ ಪಿಂಗಾರ್ ಕಲಾವಿದರ್ ಬಿದ್ರೆ ಇವರ ಸಾಮಾಜಿಕ ಪೌರಾಣಿಕ ಹಾಸ್ಯಮಯ ಕದಂಬ ನಾಟಕ ಪ್ರದರ್ಶನಗೊಳ್ಳಲಿದೆ ಎಂದು ಹೇಳಿದ್ದಾರೆ.


Aware others:

Leave a Reply

Your email address will not be published. Required fields are marked *

error: Content is protected !!