ಹೆಮ್ಮಾಡಿ: ಕುಸ್ತಿಯಲ್ಲಿ ಜನತಾ ಪಿಯು ವಿದ್ಯಾರ್ಥಿಗಳಾದ ಗಾಯತ್ರಿ, ಋತ್ವಿಕ್ ರಾಷ್ಟ್ರಮಟ್ಟಕ್ಕೆ ಆಯ್ಕೆ
ಕುಂದಾಪುರ: ಇತ್ತೀಚೆಗೆ ಬೆಳಗಾವಿಯಲ್ಲಿ ನಡೆದ ರಾಜ್ಯ ಮಟ್ಟದ ಕುಸ್ತಿ ಪಂದ್ಯಾಟದಲ್ಲಿ ಹೆಮ್ಮಾಡಿಯ ಜನತಾ ಪದವಿಪೂರ್ವ ಕಾಲೇಜಿನ ಗಾಯತ್ರಿ ಹಾಗೂ ಋತ್ವಿಕ್ ಅವರು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.


ರಾಜ್ಯಮಟ್ಟದಲ್ಲಿ ನಡೆದ ಪಂದ್ಯಾಟದಲ್ಲಿ ಉಡುಪಿ ಜಿಲ್ಲಾ ಬಾಲಕಿಯರ ತಂಡ ದ್ವಿತೀಯ ಸಮಗ್ರ ತಂಡ ಪ್ರಶಸ್ತಿಯನ್ನು ಪಡೆದುಕೊಂಡಿದೆ. ಉಡುಪಿ ಜಿಲ್ಲೆಯನ್ನು ಪ್ರತಿನಿಧಿಸಿದ ಮಹಿಳಾ ತಂಡಕ್ಕೆ ತರಬೇತಿ ಮತ್ತು ವ್ಯವಸ್ಥಾಪಕತ್ವವನ್ನು ಹೆಮ್ಮಾಡಿಯ ಜನತಾ ಪದವಿಪೂರ್ವ ಕಾಲೇಜಿನ ದೈಹಿಕ ಶಿಕ್ಷಣ ಉಪನ್ಯಾಸಕ ಕೃಷ್ಣ ಮೊಗವೀರ ವಹಿಸಿದ್ದರು.
