BlogCrime newsEntertainmentHealthHighlightsHuman storiesLifestyleLocal newsOthersState newsTop StoriesTrending

ಬೆಳ್ತಂಗಡಿ : ತೂತು ಸ್ಟೈಲಿನ ಪ್ಯಾಂಟ್ ಧರಿಸಿ ಬಂದವಗೆ ಶಾಕ್ : ಆತ್ಮಹತ್ಯೆಗೆ ಯತ್ನ

Aware others:

ಬೆಳ್ತಂಗಡಿ : ಯುವಕನೊಬ್ಬ ವಿನೂತನ ಶೈಲಿಯಲ್ಲಿ ಪ್ಯಾಂಟ್ ಧರಿಸಿ ಮಾರುಕಟ್ಟೆಗೆ ಬಂದಾಗ ಮೂರು ಜನರ ಪುಂಡರ ಗುಂಪು ಆತನನ್ನು ತಡೆದು ನಿಲ್ಲಿಸಿ ಪ್ಯಾಂಟನ್ನು ಗೋಣಿಚೀಲದ ಸೂಜಿಯಿಂದ ಹೊಲಿದು ವಿಡಿಯೋ ಮಾಡಿ ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದು, ಇದರಿಂದ ಮನನೊಂದು ಯುವಕ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನ.21ರಂದು ಸಂಭವಿಸಿದೆ.

ಪಣಕಜೆ ನಿವಾಸಿ ಮುಹಮ್ಮದ್ ಹಾಯಿಫ್ ಎಂಬವರ ಪುತ್ರ ಶಾಹಿಲ್ (21) ಎಂಬ ಯುವಕ ಈಗಿನ ಹೊಸ ರೀತಿ ಪ್ಯಾಂಟ್ ಧರಿಸಿ ನ.21 ರ ಮಧ್ಯಾಹ್ನ ಸಂತೆಕಟ್ಟೆ ಮಾರುಕಟ್ಟೆಗೆ ಬಂದಿದ್ದು, ಈ ವೇಳೆ ಮಾರುಕಟ್ಟೆಯಲ್ಲಿದ್ದ ಪಡ್ಡೆ ಯುವಕರ ತಂಡವೊಂದು ಆತನನ್ನು ಸಾರ್ವಜನಿಕ ಸ್ಥಳದಲ್ಲೇ ತಡೆದು ನಿಲ್ಲಿಸಿದ್ದಾರೆ. ಬಳಿಕ ಆತನ ಎರಡು ಕೈಗಳನ್ನು ಬಲವಂತದಿಂದ ಹಿಂದಕ್ಕೆ ಹಿಡಿದಿಟ್ಟು ಆತನ ಪ್ಯಾಂಟನ್ನು ಗೋಣಿ ಹೊಲಿಯುವ ಸೂಜಿಯಿಂದ ಹೊಲಿದು ಅದನ್ನು ಮೊಬೈಲ್ ನಲ್ಲಿ ವೀಡಿಯೊ ಚಿತ್ರೀಕರಿಸಿ ಬಳಿಕ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲ್ ಮಾಡಿ ಹರಿಯಬಿಟ್ಟಿದ್ದಾರೆ. ಲಾಯಿಲ ಗ್ರಾಮದ ಪುತ್ರಬೈಲು ನಿವಾಸಿ ಶಬೀರ್ (ಜೈಭಾರತ್), ಅನೀಶ್‌ ಪಣಕಜೆ, ಲಾಯಿಲ ಗ್ರಾಮದ ಆದರ್ಶ ನಗರ ನಿವಾಸಿ ಸಲೀಂ ಮಗನಾದ ಬಾಬ್ ಜಾನ್ ಸಾಹೇಬ್ ಎಂಬವರು ಸೇರಿ ಈ ದುಷ್ಕೃತ್ಯ ನಡೆಸಿದ್ದಾರೆ ಎನ್ನಲಾಗಿದೆ.

ವಿಡಿಯೋ ಮಾಡಿ ಟ್ರೋಲ್ ಮಾಡಿದರಿಂದ ಮಾನಸಿಕವಾಗಿ ನೊಂದ ಯುವಕ ಶಾಹಿಲ್ ನ.21 ರಂದು ಸಂಜೆ ಮನೆಯಲ್ಲಿ ಯಾವುದೊ ವಿಷ ಪದಾರ್ಥ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ತಕ್ಷಣ ಚಿಕಿತ್ಸೆಗಾಗಿ ಮನೆಯವರು ಬೆಳ್ತಂಗಡಿ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ಸೇರಿಸಿದ್ದಾರೆ. ಪ್ರಥಮ ಚಿಕಿತ್ಸೆಯ ನಂತರ ಯುವಕ ಚಿಂತಾಜನಕ ಸ್ಥಿತಿಯಲ್ಲಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಆಸ್ಪತ್ರೆಗೆ ಸೇರಿಸಲಾಗಿದೆ. ಸದ್ಯ ಯುವಕ ಜೀವನ್ಮರಣ ಸ್ಥಿತಿಯಲ್ಲಿರುವುದಾಗಿ ತಿಳಿದು ಬಂದಿದೆ.

ಯುವಕನ ಈ ಸ್ಥಿತಿಗೆ ಕಾರಣರಾದ ಮೂವರು ಪುಂಡರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಪೊಲೀಸ್ ಇಲಾಖೆಗೆ ಮನವಿ ಮಾಡುತ್ತಿದ್ದಾರೆ.


Aware others:

Leave a Reply

Your email address will not be published. Required fields are marked *

error: Content is protected !!