ಮನೆಯಲ್ಲಿಟ್ಟ ಚಿನ್ನಾಭರಣ ಕಳವು ಪ್ರಕರಣ – ದಂಪತಿ ಬಂಧನ, 2 ಲಕ್ಷ ಚಿನ್ನಾಭರಣ ವಶ
ಕುಂದಾಪುರ: ಉಡುಪಿ ಜಿಲ್ಲೆಯ ಗಂಗೊಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ತ್ರಾಸಿ ಗ್ರಾಮದಲ್ಲಿ ಮನೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ವಿನಾಯಕ(41) ಮತ್ತು ಪ್ರಮೀಳಾ(30) ಬಂಧಿತರು.


ಆರೋಪಿಗಳು ತ್ರಾಸಿಯ ಬೀಚ್ ಸಮೀಪ ಇರುವ ಉದಯ್ ಪೂಜಾರಿ ಯವರ ಮನೆಯಿಂದ 16 ಗ್ರಾಂ ತೂಕದ ಚಿನ್ನದ ನೆಕ್ಲಸ್-1, 16 ಗ್ರಾಂ ತೂಕದ ಬಳೆ-1 ಹಾಗೂ 3 ಗ್ರಾಂ ತೂಕದ 3 ಚಿನ್ನದ ಉಂಗುರವನ್ನು ಕಳವು ಮಾಡಿದ್ದರು.

ಇದೀಗ ಆರೋಪಿಗಳನ್ನು ಬಂಧಿಸಿರುವ ಪೊಲೀಸರು ಅವರಿಂದ ಎರಡು ಲಕ್ಷ ಮೌಲ್ಯದ ಚಿನ್ನಾಭರಣ ಮತ್ತು ಆರೋಪಿಗಳು ಕೃತ್ಯಕ್ಕೆ ಬಳಸಿದ ಟಿ.ವಿ.ಎಸ್ ಸ್ಕೂಟಿಯನ್ನು ವಶಪಡಿಸಿಕೊಳ್ಳಲಾಗಿದೆ .ಬಳಿಕ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ.
ಆರೋಪಿಗಳು ವಿನಾಯಕ ಖಾರ್ವಿ ಹಾಗೂ ಪ್ರಮೀಳಾ ದಂಪತಿ ಗುಜ್ಜಾಡಿ ಗ್ರಾಮದವರು ಎಂದು ತಿಳಿದುಬಂದಿದೆ, ಪ್ರಕರಣ ದಾಖಲಾದ ಕೇವಲ 7 ಗಂಟೆಗಳಲ್ಲಿ ಆರೋಪಿಗಳನ್ನು ಬಂಧಿಸಿದ ಗಂಗೊಳ್ಳಿ ಪೊಲೀಸ್ ಠಾಣಾಧಿಕಾರಿ ಹಾಗೂ ಸಿಬ್ಬಂದಿಗಳಿಗೆ ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆ ವ್ಯಕ್ತವಾಗುತ್ತಿದೆ,
