19ರ ಯುವಕ ಆತ್ಮಹತ್ಯೆ
ಕುಂದಾಪುರ: ಇಲ್ಲಿಗೆ ಸಮೀಪದ ಕೋಟೇಶ್ವರ ಎಂಬಲ್ಲಿ 19 ವರ್ಷದ ಯುವಕನೊಬ್ಬ ನೇಣಿಗೆ ಶರಣಾಗಿದ್ದಾನೆ. ಬುಧವಾರ ಬೆಳಿಗ್ಗೆ ಮನೆಯಲ್ಲಿದ್ದ ಚೂಡಿದಾರದ ಶಾಲ್ ನಿಂದ ಮನೆಯ ರೂಮ್ ನಲ್ಲಿರುವ ಪ್ಯಾನಿಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕೆಲವು ಸಮಯಗಳಿಂದ ಬೆನ್ನು ನೋವು, ಅಲರ್ಜಿ ಮತ್ತು ತಲೆ ನೋವು ಇದ್ದು ಈ ಬಗ್ಗೆ ಚಿಕಿತ್ಸೆ ಪಡೆದಿದ್ದು ಸಂಪೂರ್ಣ ಗುಣವಾಗಿರಲಿಲ್ಲ ಎನ್ನಲಾಗಿದೆ. ಾತ್ಮಹತ್ಯೆಗೆ ಇದೇ ಕಾರಣವಿರಬಹುದು ಎಂದು ಅಂದಾಜಿಸಲಾಗಿದೆ. ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
