ಆಲೂರು ಪ್ರೌಢ ಶಾಲೆ ಶಿಕ್ಷಕ ಉದಯಕುಮಾರ್ ಶೆಟ್ಟಿ ಗೆ ರಾಜ್ಯಪಾಲರಿಂದ ಗೌರವ

ಕುಂದಾಪುರ: ರಾಜ್ಯಮಟ್ಟದ ಅತ್ಯುತ್ತಮ ಮತದಾರ ಸಾಕ್ಷರತಾ ಕ್ಲಬ್ ಸಂಚಾಲಕ ಪುರಸ್ಕಾರಕ್ಕೆ ಭಾಜನರಾದ ಬೈಂದೂರು ಕ್ಷೇತ್ರದ ಶಿಕ್ಷಣಾಧಿಕಾರಿಗಳ ವ್ಯಾಪ್ತಿಗೆ ಬರುವ ಆಲೂರು ಸರಕಾರಿ ಪ್ರೌಢಶಾಲೆಯ ಶಿಕ್ಷಕ ಉದಯ ಕುಮಾರ ಶೆಟ್ಟಿಯವರನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ರು ಗೌರವಿಸಿದರು.

ಬೆಂಗಳೂರಿನ ಟೌನ್ ಹಾಲ್ ನಲ್ಲಿ ನೆಡೆದ ಕಾರ್ಯಕ್ರಮದಲ್ಲಿ ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ರು ಗೌರವಿಸಿದರು. ಕಾರ್ಯಕ್ರಮದಲ್ಲಿ ಮುಖ್ಯ ಚುನಾವಣಾಧಿಕಾರಿಗಳಾದ ಮನೋಜ್ ಕುಮಾರ ಮೀನಾ, ಬಿ.ಬಿ.ಎಂ.ಪಿ ಆಯುಕ್ತರಾದ ತುಷಾರ ಗಿರಿನಾಥ್ ಉಪಸ್ಥಿತರಿದ್ದರು.
