BlogEducationGovernmentHighlightsLocal newsSuccess storiesTop Stories

ಗಂಗೊಳ್ಳಿ : ಮೊವಾಡಿ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಸಮವಸ್ತ್ರ ವಿತರಣೆ

Aware others:

ಕುಂದಾಪುರ: ಮೊವಾಡಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ದಾನಿ ಸುರೇಶ ಮೊಗವೀರ ತ್ರಾಸಿ ಇವರು ಜಿನ್‌ಟೆಕ್ಸ್ ಕಂಪೆನಿಯ ಸಹಯೋಗದೊಂದಿಗೆ ಉಚಿತವಾಗಿ ನೀಡಿದ ಸಮವಸ್ತ್ರಗಳ ವಿತರಣಾ ಕಾರ್ಯಕ್ರಮ ಶನಿವಾರ ಶಾಲೆಯ ಸಭಾಂಗಣದಲ್ಲಿ ನಡೆಯಿತು.

ಸಮವಸ್ತ್ರವನ್ನು ವಿತರಿಸಿ ಮಾತನಾಡಿದ ಸುರೇಶ ಮೊಗವೀರ, ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿ ದೃಷ್ಟಿಯಿಂದ ಕಾರ್ಯಕ್ರಮ ರೂಪಿಸಲಾಗಿದೆ. ಶಾಲೆಯ ಅಭಿವೃದ್ಧಿಯಲ್ಲಿ ಕೈಜೋಡಿಸಲಾಗುವುದು ಎಂದರು. ಇದೇ ಸಂದರ್ಭ ದಾನಿ ಸುರೇಶ ಮೊಗವೀರ ಅವರನ್ನು ಸನ್ಮಾನಿಸಲಾಯಿತು.

ತಾಲೂಕು ಪಂಚಾಯತ್ ಸಾಮಾಜಿಕ ಪರಿಷತ್ತಿನ ಕಾರ್ಯಕ್ರಮ ವ್ಯವಸ್ಥಾಪಕ ಸುರೇಂದ್ರ, ಎಸ್‌ಡಿಎಂಸಿ ಅಧ್ಯಕ್ಷೆ ಸಂಧ್ಯಾ ಕಾರಂತ್, ತ್ರಾಸಿ ಗ್ರಾಮ ಪಂಚಾಯತ್  ಉಪಾಧ್ಯಕ್ಷೆ ಹೇಮಾ, ಎಸ್‌ಡಿಎಂಸಿ ಸದಸ್ಯರು, ಹಳೆ ವಿದ್ಯಾರ್ಥಿಗಳು, ಪೋಷಕರು ಉಪಸ್ಥಿತರಿದ್ದರು.

ಶಾಲೆಯ ಮುಖ್ಯ ಶಿಕ್ಷಕಿ ಶರಾವತಿ ಸ್ವಾಗತಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ಸಂತೋಷ ಖಾರ್ವಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ರಜನಿ ದಾನಿಗಳನ್ನು ಪರಿಚಯಿಸಿದರು. ಭಾಗೀರಥಿ ಕಾರ್ಯಕ್ರಮ ನಿರ್ವಹಿಸಿದರು. ವತ್ಸಲಾ ವಂದಿಸಿದರು.


Aware others:

Leave a Reply

Your email address will not be published. Required fields are marked *

error: Content is protected !!