ತಲ್ಲೂರು ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು-ಸ್ಕೂಟಿ ಡಿಕ್ಕಿ : ಸವಾರ ಗಂಭೀರ
ಕುಂದಾಪುರ: ಕುಂದಾಪುರ ತಾಲೂಕಿನ ತಲ್ಲೂರು ರಾಷ್ಟ್ರೀಯ ಹೆದ್ದಾರಿ 66ರ ಪೆಟ್ರೋಲ್ ಬಂಕ್ ಎದುರುಗಡೆ ಮಂಗಳವಾರ ಸಂಜೆ 5 ಗಂಟೆಯ ವೇಳೆ ಕಾರು ಮತ್ತು ಸ್ಕೂಟರ್ ನಡುವೆ ಡಿಕ್ಕಿ ಸಂಭವಿಸಿ ಸ್ಕೂಟರ್ ಸವಾರ ಜಯರಾಮ್ ಶೆಟ್ಟಿ ಎಂಬುವರು ಗಂಭೀರ ಗಾಯಗೊಂಡಿದ್ದಾರೆ.

ಜಯರಾಮ್ ಶೆಟ್ಟಿ ಅವರು ತಲ್ಲೂರು ಹಂಚಿನ ಕಾರ್ಖಾನೆಯ ಕಾರ್ಮಿಕರಾಗಿದ್ದಾರೆ ಎಂದು ತಿಳಿದು ಬಂದಿದೆ. ಸಂಜೆ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ವೇಳೆ ಎದುರಿನಿಂದ ಬಂದ ಕಾರು ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಸ್ಕೂಟರ್ ಹೆದ್ದಾರಿ ಪಕ್ಕದ ಚರಂಡಿಗೆ ಪಲ್ಟಿಯಾಗಿ ಬಿದ್ದಿದೆ. ಕುಂದಾಪುರ ಸಂಚಾರಿ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.