BlogEconomyHighlightsHuman storiesLifestyleLocal newsOthersState newsSuccess storiesTop StoriesTrendingWomen Care

ಕುಂದಾಪುರ: ಯುವ ಬಂಟರ ಸಂಘದಿಂದ ಹಿರಿಯ ಸ್ವಾವಲಂಬಿ ಮಹಿಳಾ ಸಾಧಕಿ ಗುಲಾಬಿ ಶೆಟ್ಟಿಗೆ ಸನ್ಮಾನ

Aware others:

ಕುಂದಾಪುರ: ಯುವ ಬಂಟರ ಸಂಘದ ವತಿಯಿಂದ ಗುರುವಾರ  ಸ್ವಾವಲಂಬಿ ಬದುಕು ಕಟ್ಟಿಕೊಂಡ ಉಪ್ಪಿನಕಾಯಿ ಅಜ್ಜಿ ಕುಂದಾಪುರ ತಾಲೂಕಿನ ಸಿದ್ದಾಪುರ ಗ್ರಾಮದ ಐರಬೈಲು  ನಿವಾಸಿ  ಗುಲಾಬಿ ಶೆಟ್ಟಿ ಅವರನ್ನು ಗುರುತಿಸಿ ಸನ್ಮಾನಿಸಲಾಯಿತು.

ಭಾರತದ ಪ್ರಥಮ ಮಹಿಳಾ ರಾಜ್ಯಪಾಲೆ, ಶ್ರೇಷ್ಠ ಕವಯತ್ರಿ, ಭಾರತದ ಕೋಗಿಲೆ ಸರೋಜಿನಿ ನಾಯ್ಡು ಅವರ ಜನ್ಮದಿನದ ಪ್ರಯುಕ್ತ  ರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ನಡೆದ ಈ ಕಾರ್ಯಕ್ರಮದಲ್ಲಿ ಕುಂದಾಪುರ ತಾಲೂಕು ಯುವ ಬಂಟರ ಸಂಘದ ಪರವಾಗಿ ಸಂಘದ ಗೌರವಾಧ್ಯಕ್ಷೆ ವತ್ಸಲಾ ದಯಾನಂದ ಶೆಟ್ಟಿ ಅವರ ಸ್ವಗೃಹದಲ್ಲಿ ಸನ್ಮಾನಿಸಿ ಮಾತನಾಡಿ, ಯುವ ಬಂಟರ ಸಂಘ ಗ್ರಾಮೀಣ ಪ್ರದೇಶದಲ್ಲಿ ಸ್ವಾವಲಂಬಿ ಬದುಕನ್ನು ಕಟ್ಟಿಕೊಂಡ ಇಂತಹ ಗ್ರಾಮೀಣ ಪ್ರದೇಶದ ಮಹಿಳೆಯನ್ನು ಗುರುತಿಸಿ ಗೌರವಿಸುವುದು, ಶ್ಲಾಘನೀಯ. ಇಂತಹ ಕೆಲಸಗಳನ್ನು ಎಲ್ಲಾ ಸಂಘ ಸಂಸ್ಥೆಗಳು ಮಾಡಿದಾಗ ಮಹಿಳೆಯರಿಗೆ ಆತ್ಮವಿಶ್ವಾಸ ತುಂಬುವ ಜೊತೆಗೆ ಉತ್ತೇಜನ ನೀಡಿದಂತಾಗುತ್ತದೆ ಎಂದು ಹೇಳಿದರು.

ಸಂಘದ ಅಧ್ಯಕ್ಷ ನಿತೀಶ್ ಶೆಟ್ಟಿ ಬಸ್ರೂರು, ಸ್ಥಾಪಕಾಧ್ಯಕ್ಷ ಡಾ. ಅಂಪಾರು ನಿತ್ಯಾನಂದ ಶೆಟ್ಟಿ,  ಕಾರ್ಯಕಾರಿ ಸಮಿತಿ ಸದಸ್ಯ ಜಯಪ್ರಕಾಶ್ ಶೆಟ್ಟಿ ಗೋಳಿಯಂಗಡಿ ಉಪಸ್ಥಿತರಿದ್ದರು. ಡಾ. ಚೇತನ್ ಶೆಟ್ಟಿ ಕೋವಾಡಿ ಕಾರ್ಯಕ್ರಮ ನಿರೂಪಿಸಿದರು.


Aware others:

Leave a Reply

Your email address will not be published. Required fields are marked *

error: Content is protected !!