BlogEconomyEducationFashionHighlightsHuman storiesLifestyleLocal newsOthersTop StoriesTrending

ಕುಂದಾಪುರ: ಫೆಬ್ರುವರಿ 22ರಂದು ಕೋಡಿಯಲ್ಲಿ ಬೃಹತ್ ಉದ್ಯೋಗ ಮೇಳ

Aware others:

ಕುಂದಾಪುರ: ಇಲ್ಲಿಗೆ ಸಮೀಪದ ಕೋಡಿಯಲ್ಲಿರುವ ಬ್ಯಾರೀಸ್ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಫೆಬ್ರವರಿ 22 ರಂದು ಬೃಹತ್ ಉದ್ಯೋಗ ಮೇಳ ನಡೆಯಲಿದೆ ಎಂದು ಬ್ಯಾರಿಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಹಾಜಿ ಅಬ್ದುಲ್ ರಹಿಮಾನ್ ಹೇಳಿದರು.

ಅವರು ಕುಂದಾಪುರದಲ್ಲಿ ಸುದ್ಧಿಗಾರರೊಂದಿಗೆ ಮಾತನಾಡುತ್ತಿದ್ದರು. ಉಡುಪಿ, ಮಂಗಳೂರು, ಬೆಂಗಳೂರು, ಮುಂಬೈ , ದುಬೈ ಸೇರಿ ಹತ್ತಾರು ರಾಷ್ಟೀಯ ಮತ್ತು ಅಂತಾರಾಷ್ಟ್ರೀಯ ಕಂಪೆನಿಗಳು ಈ ಬೃಹತ್ ಉದ್ಯೋಗಮೇಳದಲ್ಲಿ ಭಾಗವಹಿಸಲಿದ್ದು ನೂರಾರು ಹುದ್ದೆಗಳಿಗೆ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ವಿಶೇಷ ಚೇತನರಿಗೂ ಉಚಿತ ತರಬೇತಿ ನೀಡಿ ಉದ್ಯೋಗ ಅವಕಾಶವನ್ನೂ ನೀಡುವ ಕಂಪೆನಿಗಳು ಭಾಗವಹಿಸುತ್ತಿರುವುದು ಈ ಉದ್ಯೋಗ ಮೇಳದ ವಿಶೇಷ ಆಕರ್ಷಣೆ ಎಂದರು.

18 ವರ್ಷ ಮೇಲ್ಪಟ್ಟ 10ನೇ, ಪಿಯುಸಿ, ಐಟಿಐ, ಡಿಪ್ಲೋಮಾ, ಡಿಗ್ರಿ , ಸ್ನಾತಕೋತ್ತರ ಪಡೆದ ಅಭ್ಯರ್ಥಿಗಳು ಈ ಬೃಹತ್ ಉದ್ಯೋಗ ಮೇಳದ ಸದುಪಯೋಗ ಪಡೆದುಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು 7019693540, 7899633387 ನ್ನು ಸಂಪರ್ಕಿಸುವಂತೆ ಅವರು ಕೋರಿದ್ದಾರೆ.


Aware others:

Leave a Reply

Your email address will not be published. Required fields are marked *

error: Content is protected !!