Local newsBlogCulturalEconomyEntertainmentFashionHighlightsLifestyleOthersReligionTop StoriesTrending

ಕುಂದಾಪುರ: ಪುರಾತನ ಪ್ರಸಿದ್ಧ ಯಡಾಡಿ ಮತ್ಯಾಡಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸಂಭ್ರಮದ ಶಿವರಾತ್ರಿ

Aware others:

ಕುಂದಾಪುರ: ಸಾವಿರ ವರ್ಷಗಳ ಇತಿಹಾಸ ಇರುವ ಕುಂದಾಪುರ ತಾಲೂಕಿನ ಯಡಾಡಿ ಮತ್ಯಾಡಿ ಪ್ರಸಿದ್ಧ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸಂಭ್ರಮದ ಮಹಾಶಿವರಾತ್ರಿ ಕಾರ್ಯಕ್ರಮ ಜರಗಿತು. ಬೆಳಗ್ಗಿನಿಂದಲೇ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿವಿಧ ಪೂಜಾ ವಿಧಿ ವಿಧಾನಗಳು ನಡೆದವು. 

ವಿವಿಧೆಡೆಗಳಿಂದ ಭಕ್ತರು ಆಗಮಿಸಿ ಮಹಾಲಿಂಗೇಶ್ವರನ ಸನ್ನಿಧಾನದಲ್ಲಿ ಪೂಜಾಧಿ ಕ್ರಮಗಳನ್ನು ನೆರವೇರಿಸಿದರು. ಮಧ್ಯಾಹ್ನ ವಿಶೇಷ ಮಹಾಪೂಜೆ ನಡೆಯಿತು. ಸಾವಿರಾರು ವರ್ಷಗಳ ಇತಿಹಾಸವಿರುವ ಮಹಾಲಿಂಗೇಶ್ವರ ಪೂರಕವಾದ ಶಾಸನ ಮತ್ತು ಲಿಪಿಗಳನ್ನು ಈ ದೇವಸ್ಥಾನದಲ್ಲಿ ಕಾಣಬಹುದು. 

ಸಂಜೆ ಮಹಾ ಪೂಜೆ ನಡೆಯಲಿದೆ. ಬಳಿಕ ರಾತ್ರಿಯಿಂದ ಬೆಳಿಗ್ಗೆಯವರೆಗೆ ಆಹೋರಾತ್ರಿ ಭಜನಾ ಕಾರ್ಯಕ್ರಮದ ಜೊತೆಗೆ ಮಹಾಶಿವರಾತ್ರಿ ಆಚರಣೆ ನಡೆಯಲಿದೆ. 

ಮಾರ್ಚ್ 10ರಿಂದ 14ರವರೆಗೆ ಮಹಾಲಿಂಗೇಶ್ವರನ ಸನ್ನಿಧಿಯಲ್ಲಿ ಅಷ್ಟ ಬಂಧ ಪುನಃ ಪ್ರತಿಷ್ಠೆ ಕಾರ್ಯಕ್ರಮ ನಡೆಯಲಿದೆ ಎಂದು ದೇವಸ್ಥಾನದ ಆಡಳಿತ ಮಂಡಳಿ ತಿಳಿಸಿದೆ.


Aware others:

Leave a Reply

Your email address will not be published. Required fields are marked *

error: Content is protected !!