ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ಶುಭಾಶಂಸನಾ ಕಾರ್ಯಕ್ರಮ

ಕುಂದಾಪುರ: ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ 2024-25ನೇ ಸಾಲಿನ ಹತ್ತನೇ ತರಗತಿಯ ಮಕ್ಕಳಿಗೆ ಶುಭಾಶಂಸನಾ ಕಾರ್ಯಕ್ರಮವು ಸಂಸ್ಥೆಯ ಕಾರ್ಯದರ್ಶಿಯವರಾದ ಕೆ. ರಾಧಾಕೃಷ್ಣ ಶೆಣೈ ಯವರ ಅಧ್ಯಕ್ಷತೆಯಲ್ಲಿ ನಡೆಯಿತು.
ಈ ಸಮಾರಂಭದಲ್ಲಿ ನಮ್ಮ ಸಂಸ್ಥೆಯ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಸಂದೀಪ ಗಾಣಿಗ ರವರು ಮಕ್ಕಳಿಗೆ ಮುಂಬರುವ ಪರೀಕ್ಷೆಗೆ ಶುಭ ಹಾರೈಸಿದರು. ಶಾಲಾ ಶಿಕ್ಷಕರು ಹಾಗೂ ವಿದ್ಯಾರ್ಥಿ – ವಿದ್ಯಾರ್ಥಿನಿಯರು ತಮ್ಮ ಶಾಲಾ ಜೀವನದ ಅನುಭವಗಳನ್ನು ಹಂಚಿಕೊಂಡರು. ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯಿನಿ ರೇಷ್ಮಾ ಡಿಸೋಜಾ, ನರ್ಸರಿ ವಿಭಾಗದ ಮುಖ್ಯೋಪಾಧ್ಯಾಯಿನಿ ಪ್ರಮೀಳಾ ಡಿಸೋಜಾ ಹಾಗೂ ಪದವಿ ಪೂರ್ವ ಕಾಲೇಜಿನ ಉಪ ಪ್ರಾಂಶುಪಾಲ ಸುಜಯ್ ಕೋಟೆಗಾರ್ ಉಪಸ್ಥಿತರಿದ್ದರು.
ಮುಖ್ಯೋಪಾಧ್ಯಾಯ ಕೃಷ್ಣ ಅಡಿಗ ಸ್ವಾಗತಿಸಿದರು. ಸಂಗೀತ ಶಿಕ್ಷಕಿ ರಮಣಿ ಪ್ರಾರ್ಥನೆಗೈದರು. ಪ್ರೌಢಶಾಲಾ ಸಹಶಿಕ್ಷಕಿ ಪ್ರತಿಭಾ ಪೈ ನಿರೂಪಿಸಿ, ಪ್ರೌಢಶಾಲಾ ಸಹಶಿಕ್ಷಕಿ ಆಶಾ ಬಾಯಿ ವಂದಿಸಿದರು.