BlogCulturalEconomyEducationFashionHealthHighlightsHuman storiesLifestyleLocal newsOthersSuccess storiesTop Stories

ಸ್ವಚ್ಛತೆ ಪ್ರತಿಯೊಬ್ಬರಲ್ಲೂ ಜಾಗೃತಗೊಳ್ಳಬೇಕು : ಪಂಚವರ್ಣದಿಂದ 246ನೇ ಪರಿಸರ ಸ್ನೇಹಿ ಅಭಿಯಾನದಲ್ಲಿ ಎಚ್ ಪ್ರಮೋದ್ ಹಂದೆ

Aware others:

ಕುಂದಾಪುರ: ಅತಿಯಾಗಿ ವಿಜೃಂಭಸುತ್ತಾ ಪರಿಸರಕ್ಕೆ ಮಾರಕವಾಗುವ ಪ್ಲಾಸ್ಟಿಕ್ ಇಡೀ ಮನುಕುಲಕ್ಕೆ ಸಂಕಷ್ಟವನ್ನು ತಂದೊಡ್ಡುತ್ತಿದೆ. ಇದರ ಬಗ್ಗೆ ಜಾಗೃತಗೊಳ್ಳುವುದು ಅತ್ಯವಶ್ಯಕ ಎಂದರಲ್ಲದೆ ಪಂಚವರ್ಣ ಸಂಘಟನೆ ನಿರಂತರ ಪ್ಲಾಸ್ಟಿಕ್ ಮುಕ್ತಗೊಳಿಸುವ ಅಭಿಯಾನ ಅತ್ಯಂತ ಪ್ರಶಂಸನೀಯ. ಪ್ರತಿಯೊಬ್ಬರಲ್ಲೂ ಸ್ವಚ್ಛತೆಯ ಅರಿವು ಮೂಡಿದಾಗ ಪರಿಸರ ಉಳಿಯುತ್ತದೆ. ಪಂಚವರ್ಣದ ನಿರಂತರ ಅಭಿಯಾನ ಹೊಸ ಅಧ್ಯಾಯಕ್ಕೆ ಮುನ್ನುಡಿ ಬರೆಯಲಿದೆ ಎಂದು ಕುಂದಾಪುರ ವಕೀಲರ ಸಂಘದ ಅಧ್ಯಕ್ಷ ಎಚ್ ಪ್ರಮೋದ್ ಹಂದೆ ಹೇಳಿದರು.

?????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????

ಕೋಟದ ಪಂಚವರ್ಣ ಯುವಕ ಮಂಡಲ ಇದರ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ಇದರ ನೇತೃತ್ವದಲ್ಲಿ ಕೋಟತಟ್ಟು ಗ್ರಾಮಪಂಚಾಯತ್, ಆಶ್ರೀತ್ ಸಮೂಹ ಶಿಕ್ಷಣ ಸಂಸ್ಥೆಗಳು ಕೋಟ, ಮಣೂರು ಫ್ರೆಂಡ್ಸ್, ಹಂದಟ್ಟು ಮಹಿಳಾ ಬಳಗ ಕೋಟ ಇವರ ಸಹಯೋಗದೊಂದಿಗೆ ಕೋಟತಟ್ಟು ರಾಷ್ಟ್ರೀಯ ಹೆದ್ದಾರಿ ಸ್ವಚ್ಛತಾ ಕಾರ್ಯ ೨೪೬ನೇ ಭಾನುವಾರ ಪರಿಸರ ಸ್ನೇಹಿ ಅಭಿಯಾನವನ್ನು ಚಾಲನೆಗೊಳಿಸಿ ಮಾತನಾಡಿದರು. 

ಕೋಟತಟ್ಟು ಗ್ರಾಮ ಪಂಚಾಯತ್ ಸದಸ್ಯ ವಾಸು ಪೂಜಾರಿ, ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಕೆ.ಮನೋಹರ್ ಪೂಜಾರಿ, ಪಂಚವರ್ಣ ಮಹಿಳಾ ಮಂಡಲದ ಅಧ್ಯಕ್ಷೆ ಲಲಿತಾ ಪೂಜಾರಿ, ಪಂಚವರ್ಣ ಯುವಕ ಮಂಡಲದ ನಿಕಟಪೂರ್ವ ಅಧ್ಯಕ್ಷ ಅಜಿತ್ ಆಚಾರ್, ಸಂಚಾಲಕ ಅಮೃತ್ ಜೋಗಿ, ಸಂಘಟನಾ ಕಾರ್ಯದರ್ಶಿ ಗಿರೀಶ್ ಆಚಾರ್, ಆಶ್ರೀತ್ ಸಮೂಹ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳು ಮತ್ತಿತರರು ಉಪಸ್ಥಿತರಿದ್ದರು. ಮಹಿಳಾ ಮಂಡಲದ ಕಾರ್ಯದರ್ಶಿ ವಸಂತಿ ಹಂದಟ್ಟು ಸ್ವಾಗತಿಸಿದರು. ಮಹಿಳಾ ಮಂಡಲದ ಸಂಚಾಲಕಿ ಸುಜಾತ ಬಾಯರಿ ನಿರೂಪಿಸಿದರು. ಸಲಹಾ ಸಮಿತಿ ಅಧ್ಯಕ್ಷ ರವೀಂದ್ರ ಕೋಟ ಸಂಯೋಜಿಸಿದರು.


Aware others:

Leave a Reply

Your email address will not be published. Required fields are marked *

error: Content is protected !!