ಕೋಟ: ನಿಂತಿದ್ದ ವ್ಯಕ್ತಿಗೆ ಬೈಕ್ ಡಿಕ್ಕಿ ಗೆ ಇಬ್ಬರಿಗೆ ಗಾಯ

ಕುಂದಾಪುರ: ಹೆದ್ದಾರಿ ಬದಿಯಲ್ಲಿ ನಿಂತಿದ್ದ ಪಾದಚಾರಿಯೊಬ್ಬರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಹಾಗೂ ಪಾದಚಾರಿ ಗಂಭೀರ ಗಾಯಗೊಂಡ ಘಟನೆ ಬುಧವಾರ ಬೆಳಿಗ್ಗೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕೋಟದ ಮಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಬಳಿ ನಡೆಯಿತು. ವಸಂತ ಅಣ್ಣಪ್ಪ ಎಂಬ ವ್ಯಕ್ತಿಯೇ ಗಾಯಗೊಂಡವರು.
ಅಣ್ಣಪ್ಪ ರಸ್ತೆ ದಾಟಲೆಂದು ಹೆದ್ದಾರಿ ಪಕ್ಕದಲ್ಲಿ ನಿಂತಿದ್ದರು. ಇದೇ ಸಂದರ್ಭ ಕುಂದಾಪುರ ಕಡೆಯಿಂದ ಉಡುಪಿ ಕಡೆಗೆ ಗಣೇಶ್ ಎಂಬಾತ ಚಲಾಯಿಸುತ್ತಿದ್ದ ಬೈಕು ಅಣ್ಣಪ್ಪ ಅವರಿಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಇಬ್ಬರಿಗೂ ಗಾಯಗಳಾಗಿದ್ದು ಆಸ್ಪತ್ರೆ ಸೇರಿದ್ದಾರೆ. ಕೋಟ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
