ಶ್ರೀ ವೆಂಕಟರಮಣ ಸಮೂಹ ಶಿಕ್ಷಣ ಸಂಸ್ಥೆಗಳಿಂದ ಡಾI ಅಂಬೇಡ್ಕರ್ ಜಯಂತಿ ಆಚರಣೆ
ಕುಂದಾಪುರ: ಶ್ರೀ ವೆಂಕಟರಮಣ ಪೂರ್ವಪ್ರಾಥಮಿಕ , ಪ್ರಾಥಮಿಕ , ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜಿನವರು ಒಟ್ಟಾಗಿ ಸಂವಿಧಾನ ಶಿಲ್ಪಿ ಡಾI ಭೀಮರಾವ್ ಅಂಬೇಡ್ಕರ್ ಅವರ 134 ನೇ ಜಯಂತಿಯನ್ನು ಆಚರಿಸಿದರು. ಈ ಸಮಾರಂಭದಲ್ಲಿ ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಪುಷ್ಪ ನಮನವನ್ನು ಸಲ್ಲಿಸಲಾಯಿತು.

ಈ ಸಂದರ್ಭ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಸಂದೀಪ್ ಗಾಣಿಗ, ಪ್ರೌಢ ಶಾಲಾ ಮುಖ್ಯೋಪಾಧ್ಯಾಯ ಕೃಷ್ಣ ಅಡಿಗ, ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯಿನಿ ರೇಷ್ಮಾ ಡಿಸೋಜಾ, ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯಿನಿ ಪ್ರಮೀಳಾ ಡಿಸೋಜಾ ಹಾಗೂ ಸಮೂಹ ಸಂಸ್ಥೆಯ ಬೋಧಕ, ಬೋಧಕೇತರ ಸಿಬ್ಬಂದಿಯವರು ಉಪಸ್ಥಿತರಿದ್ದರು.