ಕುಂದಾಪುರ: ಪಹಲ್ಗಾಂ ಉಗ್ರ ದಾಳಿ : ದ್ರಾವಿಡ ಬ್ರಾಹ್ಮಣ ಪರಿಷತ್ತು ಖಂಡನೆ

ಕುಂದಾಪುರ: ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಭಯೋತ್ಪಾದಕರ ದಾಳಿ ಖಂಡನೀಯ ಎಂದು ಕುಂದಾಪುರ ತಾಲೂಕು ದ್ರಾವಿಡ ಬ್ರಾಹ್ಮಣ ಪರಿಷತ್ತು ನಿರ್ದೇಶಕ ರಾಘವೇಂದ್ರ ಅಡಿಗ ಹೇಳಿದ್ದಾರೆ.
ಕುಂದಾಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಾರತದ ಸ್ವರ್ಗ ಎಂದೇ ಬಿಂಬಿತವಾಗಿರುವ ಕಾಶ್ಮೀರದಲ್ಲಿ 28 ಜನ ಪ್ರವಾಸಿಗರನ್ನು ಬಲಿ ಪಡೆದ ಭಯೋತ್ಪಾದಕರನ್ನು ಕೂಡಲೆ ಪತ್ತೆಹಚ್ಚಿ ನಿರ್ನಾಮ ಮಾಡಬೇಕು, ಹಿಂದುಗಳಿಗೆ ರಕ್ಷಣೆ ನೀಡಬೇಕು ಎಂದು ಆಗ್ರಹಿಸಿದರು.
ಪತ್ರಿಕಾಗೋಷ್ಟಿಯಲ್ಲಿ ಕುಂದಾಪುರ ತಾಲೂಕು ದ್ರಾವಿಡ ಬ್ರಾಹ್ಮಣ ಪರಿಷತ್ತು ಅಧ್ಯಕ್ಷರಾದ ಎಸ್.ಕೃಷ್ಣಾನಂದ ಚಾತ್ರ, ಉಡುಪಿ ಜಿಲ್ಲಾ ಬ್ರಾಹ್ಮಣ ಮಹಾಸಭಾ ಪ್ರಧಾನ ಕಾರ್ಯದರ್ಶಿ ಗಣೇಶ ರಾವ್, ಯುವ ವಿಪ್ರ ವೇದಿಕೆ ಅಧ್ಯಕ್ಷೆ ಪವಿತ್ರ ಅಡಿಗ ಉಪಸ್ಥಿತರಿದ್ದರು.
