BlogEconomyEducationGovernmentHighlightsHuman storiesLifestyleLocal newsOthersState newsSuccess storiesTop StoriesTrendingWomen Care

ಹಟ್ಟಿಯಂಗಡಿ: ಐಸಿಎಸ್ಇ 10ನೇ ತರಗತಿಯಲ್ಲಿ ಸಿದ್ಧಿವಿನಾಯಕ ಶಾಲೆಗೆ ಶೇಕಡಾ 100 ಫಲಿತಾಂಶ

Aware others:

ಕುಂದಾಪುರ: ಶಿಕ್ಷಣದ ಗುಣಮಟ್ಟ, ಶಿಸ್ತಿನ ವಾತಾವರಣ ಹಾಗೂ ವಿದ್ಯಾರ್ಥಿಗಳ ಸಮಗ್ರ ಅಭಿವೃದ್ಧಿಗೆ ಹೆಸರುವಾಸಿಯಾಗಿರುವ ಕುಂದಾಪುರ ತಾಲ್ಲೂಕಿನ ಏಕೈಕ ಐಸಿಎಸ್ಇ ಪಠ್ಯಕ್ರಮದ ಹಟ್ಟಿಯಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆ ಶೇ. 100 ಫಲಿತಾಂಶದೊಂದಿಗೆ ತನ್ನ ಶ್ರೇಷ್ಠತೆಯನ್ನು ಮತ್ತೊಮ್ಮೆ ಸಾಬೀತುಪಡಿಸಿದೆ.  ಆ ಮೂಲಕ ಕಳೆದ  22 ವರ್ಷದಿಂದ ನೂರಕ್ಕೆ ನೂರು ಫಲಿತಾಂಶ ದಾಖಲಿಸಿದಂತಾಗಿದೆ.

ಕುಮಾರಿ ದೀಕ್ಷಾ ಕೋರಿ  98.80%

ಈ ವರ್ಷ 237 ವಿದ್ಯಾರ್ಥಿಗಳು ಐಸಿಎಸ್ಇ 10ನೇ ವರ್ಗದ ವಾರ್ಷಿಕ ಪರೀಕ್ಷೆಗೆ ಹಾಜರಾಗಿದ್ದು, 139 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ, 98 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ.

ಕುಮಾರಿ ನಿಧಿ ಶೆಟ್ಟಿ 98.60%

ಕುಮಾರಿ ದೀಕ್ಷಾ ಕೋರಿ  98.80% ಅಂಕದೊಂದಿಗೆ  ಪ್ರಥಮ ಸ್ಥಾನ, ಕುಮಾರಿ ನಿಧಿ ಶೆಟ್ಟಿ 98.60%  ದ್ವಿತೀಯ ಸ್ಥಾನ ಹಾಗೂ ಕುಮಾರಿ ಹರ್ಷಿತಾ ಎಸ್. ಪೂಜಾರಿ 98.20% ಅಂಕದೊಂದಿಗೆ ತೃತೀಯ ಸ್ಥಾನವನ್ನು ಪಡೆದಿರುತ್ತಾರೆ.

ಕುಮಾರಿ ಹರ್ಷಿತಾ ಎಸ್. ಪೂಜಾರಿ 98.20%

ರಾಜ್ಯ ಮತ್ತು ಹೊರರಾಜ್ಯಗಳ ಸುಮಾರು 1800ಕ್ಕೂ ಹೆಚ್ಚು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು, 660 ಮಕ್ಕಳಿಗೆ ಸುಸಜ್ಜಿತ ವಸತಿ ವ್ಯವಸ್ಥೆ ಕಲ್ಪಿಸಲಾಗಿದೆ. ವಸತಿ, ಪಾಠಶಾಲೆ, ಶೈಕ್ಷಣಿಕ ನೆರವು, ಶಿಸ್ತು – ಎಲ್ಲವನ್ನೂ ಒಟ್ಟಿಗೆ ನೀಡುತ್ತಿರುವ ಈ ಸಂಸ್ಥೆ ಈ ಭಾಗದ ಮಾದರಿ ವಸತಿ ಶಾಲೆಯಾಗಿ ಹೊರಹೊಮ್ಮಿದೆ. ವಿದ್ಯಾರ್ಥಿಗಳಿಗೆ ಮತ್ತು ಶಾಲಾ ಶಿಕ್ಷಕ ಶಿಕ್ಷಕೇತರ ವರ್ಗಕ್ಕೆ ಪ್ರಾಂಶುಪಾಲ ಶರಣ್ ಕುಮಾರ್ ಅಭಿನಂದಿಸಿದ್ದಾರೆ.


Aware others:

Leave a Reply

Your email address will not be published. Required fields are marked *

error: Content is protected !!