BlogEconomyFashionGovernmentHighlightsHuman storiesLifestyleLocal newsOthersPoliticsTop StoriesTrending

ಏಕ ನಿವೇಶನ ನಕ್ಷೆ ಅನುಮೋದನೆ ಹಾಗೂ ನಮೂನೆ 9/11ರಲ್ಲಿ ಸಮಸ್ಯೆ – ಶಾಸಕ ಕೊಡ್ಗಿಯವರಿಂದ ಅಧಿಕಾರಿಗಳಿಗೆ ತರಾಟೆ

Aware others:

ಕುಂದಾಪುರ: ಉಡುಪಿ ಜಿಲ್ಲೆಯಲ್ಲಿ ಏಕ ನಿವೇಶನ ನಕ್ಷೆ ಅನುಮೋದನೆ ಹಾಗೂ ನಮೂನೆ 9/11ರಲ್ಲಿ ಎದುರಾಗುತ್ತಿರುವ ಸಮಸ್ಯೆಗಳ ಬಗ್ಗೆ ನೋಡುತ್ತಾ ಕುಳಿತುಕೊಳ್ಳಲು ಸಾಧ್ಯವಿಲ್ಲ. ಸರಕಾರದ ಮೂಲ ಆದೇಶದಂತೆ ರಸ್ತೆಯ ಭೂಗಡಿಯ ಆರು ಮೀಟರ್ ಬಿಟ್ಟು ಕಟ್ಟಡ ಕಟ್ಟಲು ಅನುಮತಿಯನ್ನು ನೀಡಲು ಶೀಘ್ರದಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ ಅವರು ಅಧಿಕಾರಿಗಳನ್ನು ತರಾಟೆಗೆತ್ತಿಕೊಂಡಿದ್ದಾರೆ.

ಮೇ 31ರ ಶನಿವಾರ ುಡುಪಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕರೆದ ಯೋಜನಾ ಪ್ರಾಧಿಕಾರದ ಅಧಿಕಾರಿಗಳ ಸಭೆಯಲ್ಲಿ ಶಾಸಕ ಕೊಡ್ಗಿ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ. ಬಹುದಿನಗಳಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದ್ದು ಇದನ್ನು ನೋಡುತ್ತಾ ಕುಳಿತುಕೊಳ್ಳಲು ಸಾಧ್ಯವಿಲ್ಲ ಸರಕಾರದ ಮೂಲ ಆದೇಶದಂತೆ ರಸ್ತೆಯ ಭೂಗಡಿಯ ಆರು ಮೀಟರ್ ಬಿಟ್ಟು ಕಟ್ಟಡ ಕಟ್ಟಲು ತಕ್ಷಣ ಻ನುಮತಿ ನೀಡಲು ಕ್ರಮ ಕೈಗೊಳ್ಳಬೇಕು ಎಂದರು. ಅಲ್ಲದೇ ಅರ್ಜಿದಾರರ ಅರ್ಜಿಗಳನ್ನು ನಿಗದಿತ ಕಾಲ ಮಿತಿಯಲ್ಲಿ ವಿಲೇವಾರಿ ಮಾಡಬೇಕು ಎಂದರು.

ಈ ಸಂದರ್ಭ ಉಡುಪಿ ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿಯ, ಉಡುಪಿ ಶಾಸಕ ಯಶ್ಪಾಲ್ ಸುವರ್ಣ, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ಉಡುಪಿ ನಗರಸಭಾ ಅಧ್ಯಕ್ಷ ಪ್ರಭಾಕರ್ ಪೂಜಾರಿ ಹಾಗೂ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.


Aware others:

Leave a Reply

Your email address will not be published. Required fields are marked *

error: Content is protected !!