ಕುಂದಾಪುರ: ಸಂಜಯ ಗಾಂಧಿ ಶಾಲೆಯಲ್ಲಿ ಸಂಭ್ರಮದ ಪ್ರಾರಂಭೋತ್ಸವ
ಕುಂದಾಪುರ: ಇಲ್ಲಿನ ಅಂಪಾರು ಸಂಜಯಗಾಂಧಿ ಆಂಗ್ಲ ಮಾಧ್ಯಮ ಶಾಲೆಯ 2025-26ನೇ ಸಾಲಿನ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವ ಕಾರ್ಯಕ್ರಮ ಜೂನ್ 2ರಂದು ನಡೆಯಿತು.

ಸಂಜಯಗಾಂಧಿ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷ ಸಂತೋಷ್ ಶೆಟ್ಟಿ ರಿಬ್ಬನ್ ಕತ್ತರಿಸುವುದರ ಮೂಲಕ ನೆರವೇರಿಸಿದರು. ಸಂಸ್ಥೆಯ ಖಜಾಂಚಿ ಕೊಡ್ಲಾಡಿ ಸುಭಾಶ್ಚಂದ್ರ ಶೆಟ್ಟಿ ದೀಪ ಬೆಳಗಿಸಿ ಶೈಕ್ಷಣಿಕ ವರ್ಷಕ್ಕೆ ಚಾಲನೆ ನೀಡಿದರು. ಕಿಂಡರ್ಗಾರ್ಟನ್ ಮಕ್ಕಳನ್ನೊಳಗೊಂಡ ವಿದ್ಯಾರ್ಥಿಗಳ ತಂಡ ಜ್ಞಾನ, ದೈವಿಕತೆ, ಸಮೃದ್ಧಿಯ ಪ್ರತೀಕವಾಗಿರುವ ಮಂಗಳಕರ ಹಣತೆಯನ್ನು ಬೆಳಗುವ ಮೂಲಕ ಶುಭಾರಂಭಗೊಳಿಸಿದರು.
ಶಾಲಾ ಆಡಳಿತಾಧಿಕಾರಿ ಚೈತ್ರ ಯಡಿಯಾಳ ಮಕ್ಕಳಿಗೆ ಆರತಿ ಬೆಳಗಿ ಹೂವು, ಅಕ್ಷತೆಯೊಂದಿಗೆ ಬರಮಾಡಿಕೊಂಡರು. ಮುಖ್ಯ ಶಿಕ್ಷಕಿ ವಿಲಾಸಿನಿ ಶೆಟ್ಟಿ ಸ್ವಾಗತಿಸಿ, ಸಂಯೋಜಕಿ ಸರೋಜ ವಂದಿಸಿದರು. ಶಿಕ್ಷಕರು ವಿದ್ಯಾರ್ಥಿಗಳಿಗೆ ಸಿಹಿ ಹಂಚಿ ಶುಭ ಹಾರೈಸಿದರು.
