BlogEducationGovernmentHighlightsHuman storiesLifestyleLocal newsNatureOthersTop StoriesTrendingWomen Care

ನಾಳೆ ಉಡುಪಿ ಜಿಲ್ಲೆಯ ಎಲ್ಲಾ ಶಾಲೆಗಳಿಗೆ ರಜೆ 

Aware others:

ಕುಂದಾಪುರ: ಉಡುಪಿ ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು, ದಿನಾಂಕ:11.06.2025ರ ಹವಾಮಾನ ಇಲಾಖೆಯ ರೆಡ್ ಆಲರ್ಟ್ ಮುನ್ಸೂಚನೆಯಂತೆ ಮಳೆಯ ತೀವ್ರತೆ ಹೆಚ್ಚಾಗುವುದರಿಂದ ಮುಂಜಾಗೃತಾ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ನಾಳೆ ದಿನಾಂಕ:12.06.2025 ರಂದು ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆ ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಿಸಲಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

ಉಳಿದಂತೆ ಎಲ್ಲಾ ಪದವಿ, ಸ್ನಾತಕೊತ್ತರ ಪದವಿ, ಡಿಪ್ಲೋಮ, ಇಂಜಿನಿಯರಿಂಗ್, ಐ.ಟಿ.ಐ ಕಾಲೇಜುಗಳಿಗೆ ರಜೆ ಇರುವುದಿಲ್ಲ ಎಂದು ಸೂಚಿಸಲಾಗಿದೆ.


Aware others:

Leave a Reply

Your email address will not be published. Required fields are marked *

error: Content is protected !!