ಕೊಲ್ಲೂರು ಮೂಕಾಂಬಿಕೆ ದೇವಸ್ಥಾನಕ್ಕೆ ಗೃಹಸಚಿವ ಪರಮೇಶ್ವರ್ ಭೇಟಿ


ಕುಂದಾಪುರ : ರಾಜ್ಯ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ, ಮೂಕಾಂಬಿಕೆಯ ದರ್ಶನ ಪಡೆದು ದೇವಳದಲ್ಲಿ ವಿಶೇಷ ಪೂಜೆಯಲ್ಲಿ ಭಾಗಿಯಾದರು. ಕ್ಷೇತ್ರದ ಪ್ರಧಾನ ಅರ್ಚಕ ನರಸಿಂಹ ಅಡಿಗ ಅವರ ನೇತೃತ್ವದಲ್ಲಿ ವಿಶೇಷ ಪೂಜೆ ನಡೆಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ವತಿಯಿಂದ ಗೃಹ ಸಚಿವರನ್ನು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೆ. ಬಾಬು ಹೆಗ್ಡೆ ಸನ್ಮಾನಿಸಿದರು.


ಶುಕ್ರವಾರ ಮಂಗಳೂರಿನಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದ ಗೃಹ ಸಚಿವ ಡಾ. ಜಿ. ಪರಮೇಶ್ವರ್, ರಾತ್ರಿ ವೇಳೆ ಕೊಲ್ಲೂರಿಗೆ ಭೇಟಿ ನೀಡಿ ವಾಸ್ತವ್ಯ ಮಾಡಿದರು. ಮೀನುಗಾರಿಕಾ ಸಚಿವ ಮಾಂಕಾಳ್ ವೈದ್ಯ, ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ, ವ್ಯವಸ್ಥಾಪನಾ ಸಮಿತಿ ಸದಸ್ಯರು, ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಎಸ್.ರಾಜು ಪೂಜಾರಿ, ಎಂ.ಎ. ಗಫೂರ್ ಸೇರಿದಂತೆ ಹಲವು ಕಾಂಗ್ರೆಸ್ ಮುಖಂಡರು ಭಾಗಿಯಾಗಿದ್ದರು.