Local newsBlogCrime newsFashionHighlightsHuman storiesLifestyleObituaryTop StoriesTrendingWomen Care

ಹಿಲಿಯಾಣ: ಪತ್ನಿಯನ್ನು ಹೊಡೆದು ಕೊಂದ ಪತಿ – ಆರೋಪಿ ಆರೆಸ್ಟ್

Aware others:

ಕುಂದಾಪುರ: ಹೆಂಡತಿಯೊಂದಿಗೆ ತಕರಾರು ತೆಗೆದು ಗಲಾಟೆ ನಡೆಸಿ ಮಾತಿಗೆ ಮಾತು ಬೆಳೆದು ಉದ್ರೇಕಗೊಂಡ ಪತಿ ಪತ್ನಿಯನ್ನೇ ಹೊಡೆದು ಕೊಂದ ಘಟನೆ ಗುರುವಾರ ತಡರಾತ್ರಿ ಶಂಕರನಾರಾಯಣ ಪೊಲೀಸ್ ಠಾಣಾ ವ್ಯಾಪ್ತಿಯ ಹಿಲಿಯಾಣ ಎಂಬಲ್ಲಿ ನಡೆದಿದೆ. ಇಲ್ಲಿನ ದರ್ಕಾಸು ನಿವಾಸಿ ಗಣೇಶ್ ಪೂಜಾರಿ(43) ಎಂಬಾತನೇ ಪತ್ನಿಯನ್ನು ಕೊಂದ  ಆರೋಪಿ. ಗಣೇಶ್ ಪೂಜಾರಿ ಪತ್ನಿ ರೇಖಾ ಪೂಜಾರಿ(26) ಪತಿಯಿಂದ ಕೊಲೆಯಾದ ದುರ್ದೈವಿ.

ವೃತ್ತಿಯಲ್ಲಿ ಪೇಂಟಿಂಗ್ ಕೆಲಸ ಮಾಡಿಕೊಂಡಿದ್ದ ಗಣೇಶ್ ಪೂಜಾರಿ ಗುರುವಾರ ತಡರಾತ್ರಿ ಮನೆಗೆ ಬಂದು ಕ್ಷುಲ್ಲಕ ಕಾರಣಕ್ಕೆ ಪತ್ನಿ ಯೊಂದಿಗೆ ಜಗಳಕ್ಕೆ ನಿಂತಿದ್ದ. ಪತ್ನಿಯ ಕುತ್ತಿಗೆಗೆ ಕತ್ತಿಯಿಂದ ಗಣೇಶ್ ಪೂಜಾರಿ ಹೂಡೆದಿದ್ದು ತಲೆಗೆ ಗಂಭೀರ ಗಾಯಗೊಂಡ ರೇಖಾ ಸ್ಥಳದಲ್ಲಿ ಸಾವನ್ನಪ್ಪಿದ್ದಾಳೆ ಎಂದು ತಿಳಿದು ಬಂದಿದೆ. 

ಬಳಿಕ ಮನೆಯಿಂದ ಓಡಿ ಹೋಗಿದ್ದ ಆರೋಪಿ ಗಣೇಶ್ ಪೂಜಾರಿಯನ್ನು ಶಂಕರನಾರಾಯಣ ಪೊಲೀಸರು ಹುಡುಕಾಡಿ ಕೊನೆಗೆ ಶಂಕರನಾರಾಯಣದಲ್ಲಿ ಬಂಧಿಸಿದ್ದಾರೆ ಇಂದು ತಿಳಿದು ಬಂದಿದೆ ಕೊಲೆಯಾದ ರೇಖಾ ಪೂಜಾರಿ ಹಾಗೂ ಆರೋಪಿ ಗಣೇಶ ಪೂಜಾರಿ ದಂಪತಿಗಳಿಗೆ ಒಬ್ಬ 6 ವರ್ಷ ಮತ್ತು ಇನ್ನೊಬ್ಬ 3 ವರ್ಷದ ಇಬ್ಬರು ಗಂಡು ಮಕ್ಕಳಿದ್ದಾರೆ. ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೆಚ್ಚಿನ ಮಾಹಿತಿ ತನಿಖೆಯಿಂದ ಹೊರ ಬರಬೇಕಿದೆ


Aware others:

Leave a Reply

Your email address will not be published. Required fields are marked *

error: Content is protected !!