BlogEconomyEducationElectionEntertainmentFashionGovernmentHighlightsLifestyleLocal newsOthersPoliticsTop StoriesTrending

ಬೈಂದೂರು : ಸಿದ್ಧರಾಮಯ್ಯನವರ ಕನಸಿನ ಕೂಸು ಇಂದಿರಾ ಕ್ಯಾಂಟೀನ್ – ಸಚಿವೆ ಹೆಬ್ಬಾಳ್ಕರ್

Aware others:

ಬೈಂದೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕನಸಿನ ಕೂಸು ಇಂದಿರಾ ಕ್ಯಾಂಟೀನ್. ಪ್ರತಿಯೊಬ್ಬರಿಗೂ ಮೂರು ಹೊತ್ತು ಊಟ ದೊರೆಯಬೇಕು ಎನ್ನುವ ನಿಟ್ಟಿನಲ್ಲಿ ಉತ್ತಮ ಗುಣಮಟ್ಟದ ಪೌಷ್ಟಿಕಾಂಶಯುಕ್ತ ಆಹಾರಕ್ಕಾಗಿ ಐದು ರೂಪಾಯಿಗೆ ತಿಂಡಿ, ಹತ್ತು ರೂಪಾಯಿ ಬೆಲೆಯೊಂದಿಗೆ ಇಂದಿರಾ ಕ್ಯಾಂಟೀನ್ ಆರಂಭವಾಯಿತು. ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.

ಅವರು ಬೈಂದೂರಿನ ರೋಟರಿ ಭವನದಲ್ಲಿ ನಡೆದ ಇಂದಿರಾ ಕ್ಯಾಂಟೀನ್ ಉದ್ಘಾಟನೆ ಮತ್ತು ಅರ್ಹ ಫಲಾನುಭವಿಗಳಿಗೆ 94ಸಿ ಹಕ್ಕು ಪತ್ರಗಳ ವಿತರಣೆ ಮತ್ತು ವಿವಿಧ ಸರ್ಕಾರಿ ಸವಲತ್ತುಗಳ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಈ ಸಂದರ್ಭ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಗೌರವಿಸಲಾಯಿತು. ಅರ್ಹ ಫಲಾನುಭವಿಗಳಿಗೆ ಹೊಲಿಗೆ ಯಂತ್ರವನ್ನು ವಿತರಿಸಲಾಯಿತು. ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ, ಉಪವಿಭಾಗಾಧಿಕಾರಿ ರಶ್ಮಿ ಎಸ್.ಆರ್, ಶಾಸಕ ಗುರುರಾಜ ಗಂಟಿಹೊಳೆ, ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ, ಕುಂದಾಪುರ ತಹಶಿಲ್ದಾರ್ ಪ್ರದೀಪ್ ಕುರ್ಡೇಕರ್, ಬೈಂದೂರು ತಹಶೀಲ್ದಾರ್ ಎಚ್. ರಾಮಚಂದ್ರಪ್ಪ, ಬೈಂದೂರು ಪಟ್ಟಣ ಪಂಚಾಯತಿಯ ಮುಖ್ಯಾಧಿಕಾರಿ ಅಜಯ್ ಭಂಡಾರ್ಕರ್, ಬೈಂದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅರವಿಂದ ಪೂಜಾರಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಅಶೋಕ್ ಕೊಡವೂರು, ಉಪಾಧ್ಯಕ್ಷ ಉದಯ ಕುಮಾರ್ ಶೆಟ್ಟಿ ಕಾರ್ಕಳ, ಸದಸ್ಯ ಪ್ರದೀಪ್ ಕುಮಾರ್ ಶೆಟ್ಟಿ, ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಮೋಹನ್ ಪೂಜಾರಿ, ಜಿಪಂ ಮಾಜಿ ಅಧ್ಯಕ್ಷ ಎಸ್. ರಾಜು ಪೂಜಾರಿ, ಪ.ಪಂ ನಾಮನಿರ್ದೇಶಿತ ಸದಸ್ಯರಾದ ಸದಾಶಿವ ಡಿ. ಪಡುವರಿ, ನಾಗರಾಜ ಗಾಣಿಗ ಮೊದಲಾದವರು ಉಪಸ್ಥಿತರಿದ್ದರು.


Aware others:

Leave a Reply

Your email address will not be published. Required fields are marked *

error: Content is protected !!