ಅಂಪಾರು: ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ
ಕುಂದಾಪುರ: ಯೋಗದಿಂದ ಸಂಪೂರ್ಣ ಸ್ವಾಸ್ಥ್ಯ ಸಾಧ್ಯ. ಸಂಪ್ರದಾಯಬದ್ಧ ಭಾರತೀಯ ಜೀವನ ಶೈಲಿಯಲ್ಲಿ ಯೋಗ ಒಂದು ಭಾಗವೇ ಆಗಿತ್ತು ಎಂದು ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆಯ ಆಡಳಿತಾಧಿಕಾರಿ ಚೈತ್ರ ಯಡಿಯಾಳ ಹೇಳಿದರು.

ಅವರು ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. “ಯೋಗಃ ಸ್ವಸ್ಥ ಜೀವನಮ್” ಎಂಬ ಘೋಷಣೆಯೊಂದಿಗೆ ಯೋಗವು ಆರೋಗ್ಯಕರ ಜೀವನ ಶೈಲಿಯಾಗಿದೆ. ತಿಳಿಸಿದರು.
ಬಳಿಕ ಶಾಲಾ ಶಿಕ್ಷಕ ಪ್ರದೀಪ್ ಕುಮಾರ್ ನಿರ್ದೇಶನದಲ್ಲಿ ವಿದ್ಯಾರ್ಥಿಗಳು ಏಕಕಾಲಕ್ಕೆ ಸೂರ್ಯ ನಮಸ್ಕಾರ, ವಿವಿಧ ಯೋಗಾಸನ ಹಾಗೂ ಪ್ರಾಣಾಯಾಮಗಳನ್ನು ಮಾಡುವ ಮೂಲಕ ಯೋಗ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಿದರು.
ಶಿಕ್ಷಕಿ ಪ್ರಜ್ಞಾ ಕಾರ್ಯಕ್ರಮ ನಿರೂಪಿಸಿದರು.ಶಾಲಾ ಮುಖ್ಯೋಪಾಧ್ಯಾಯರು, ಶಿಕ್ಷಕ – ಶಿಕ್ಷಕಿಯರು, ಬೋಧಕೇತರ ಸಿಬ್ಬಂದಿ ವರ್ಗದವರು ಪಾಲ್ಗೊಂಡಿದ್ದರು.
