BlogAuto worldEducationEntertainmentGovernmentHelpHighlightsHuman storiesLifestyleLocal newsOthersPoliticsState newsSuccess storiesTechTop StoriesTrendingWomen Care

ಕೊಲ್ಲೂರು – ಶಂಕರನಾರಾಯಣ ಬಸ್ ಸೌಲಭ್ಯಕ್ಕೆ ವಿದ್ಯಾರ್ಥಿಗಳಿಂದ ಸಚಿವರಿಗೆ ಮನವಿ – ಕ್ರಮಕ್ಕೆ ಸಚಿವರ ಆದೇಶ!

Aware others:

ಕುಂದಾಪುರ : ಕೊಲ್ಲೂರಿನಿಂದ ವಂಡ್ಸೆ ಮಾರ್ಗವಾಗಿ ಶಂಕರನಾರಾಯಣಕ್ಕೆ ಬಸ್ ಸೌಲಭ್ಯ ಒದಗಿಸುವಂತೆ ಆಗ್ರಹಿಸಿ ಶಂಕರನಾರಾಯಣ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಮಂಗಳವಾರ ಕೋಟೇಶ್ವರದಲ್ಲಿ ರಾಜ್ಯ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.

ಶಂಕರನಾರಾಯಣ ಕಾಲೇಜಿಗೆ ಕೊಲ್ಲೂರು, ಇಡೂರು, ಚಿತ್ತೂರು, ವಂಡ್ಸೆ, ನೇರಳಕಟ್ಟೆ, ಅಂಪಾರು, ಬೈಂದೂರು ಮೊದಲಾದ ಕಡೆಗಳಿಂದ ಆಗಮಿಸುವ 150ಕ್ಕೂ ಮಿಕ್ಕಿ ವಿದ್ಯಾರ್ಥಿಗಳಿಗೆ ಸೂಕ್ತ ಸಾರಿಗೆ ಸಂಪರ್ಕದ ವ್ಯವಸ್ಥೆ ಇಲ್ಲ. ತಾಲೂಕಿನಲ್ಲಿ ಉತ್ತಮ ಶಿಕ್ಷಣ ಕೇಂದ್ರವಾದ ಶಂಕರನಾರಾಯಣ ಕಾಲೇಜಿಗೆ ವಿದ್ಯಾರ್ಥಿಗಳು ಕಷ್ಟಪಟ್ಟು ನಡೆದುಕೊಂಡು ಬರುತ್ತಿದ್ದಾರೆ. ಬೆಳಿಗ್ಗೆ ಒಂದು ಖಾಸಗಿ ಬಸ್ ಮಾತ್ರ ಸಂಚರಿಸುತ್ತಿದ್ದರೆ, ಸಂಜೆ ಕಾಲೇಜು ಬಿಟ್ಟ ನಂತರ 6 ಗಂಟೆವರೆಗೂ ಮನೆಗೆ ತೆರಳಲು ಯಾವುದೇ ಬಸ್ ಸೌಕರ್ಯ ಇಲ್ಲ ಎಂದು ಸಚಿವರ ಮುಂದೆ ಸಮಸ್ಯೆಗಳನ್ನು ಬಿಚ್ಚಿಟ್ಟ ವಿದ್ಯಾರ್ಥಿಗಳು ಶಂಕರನಾರಾಯಣ ಮಾರ್ಗದಲ್ಲಿ ಬೆಳಿಗ್ಗೆ ಮತ್ತು ಸಂಜೆ ಸಮಯ ಬಸ್ ಸೌಕರ್ಯ ಒದಗಿಸುವಂತೆ ಮನವಿ ಮಾಡಿದರು.

ವಿದ್ಯಾರ್ಥಿಗಳ ಮನವಿಗೆ ಸ್ಪಂದಿಸಿದ ಸಚಿವ ರಾಮಲಿಂಗಾ ರೆಡ್ಡಿ ಅವರು, ಕೆಎಸ್‍ಆರ್‍ಟಿಸಿ ಮಂಗಳೂರು ಘಟಕದ ವಿಭಾಗೀಯ ನಿಯಂತ್ರಣಾಧಿಕಾರಿ ರಾಜೇಶ ಶೆಟ್ಟಿ ಅವರನ್ನು ಕರೆದು, ವಿದ್ಯಾರ್ಥಿಗಳ ಸಮಸ್ಯೆಯನ್ನು ಬಗೆಹರಿಸಿ ಬಸ್ ಸೌಕರ್ಯ ಕಲ್ಪಿಸಲು ಕ್ರಮಕೈಗೊಳ್ಳುವಂತೆ ಸೂಚನೆ ನೀಡಿದರು.


Aware others:

Leave a Reply

Your email address will not be published. Required fields are marked *

error: Content is protected !!