ಕೊಲ್ಲೂರು: ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿಯವರಿಗೆ ದೇವಳದ ವತಿಯಿಂದ ಸನ್ಮಾನ
ಕುಂದಾಪುರ ಸಮೀಪದ ಕೊಲ್ಲೂರಿನ ಶ್ರೀಮೂಕಾಂಬಿಕಾ ಶ್ರೀಮೂಕಾಂಬಿಕಾ ದೇವಸ್ಥಾನಕ್ಕೆ ಮಂಗಳವಾರ ಭೇಟಿ ನೀಡಿದ ಮುಜರಾಯಿ ಹಾಗೂ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಅವರನ್ನು ಗೌರವಿಸಲಾಯಿತು.

ದೇಗುಲಕ್ಕೆ ಆಗಮಿಸಿದ ಸಚಿವ ರಾಮಲಿಂಗ ರೆಡ್ಡಿ ಅವರನ್ನು ಪೂರ್ಣಕುಂಭದೊಂದಿಗೆ ಸ್ವಾಗತಿಸಲಾಯಿತು. ಹಿರಿಯ ಅರ್ಚಕರಾದ ಡಾ.ನಾರ್ಸಿ ನರಸಿಂಹ ಅಡಿಗ, ಅರ್ಚಕರಾದ ಎನ್.ಸುಬ್ರಮಣ್ಯ ಅಡಿಗ, ಸುರೇಶ್ ಭಟ್, ಸುದರ್ಶನ್ ಜೋಯಿಸ್ ಕೊಲ್ಲೂರು ಅವರ ನೇತೃತ್ವದಲ್ಲಿ ಧಾರ್ಮಿಕ ಪೂಜಾ ವಿಧಿಗಳನ್ನು ನಡೆಸಲಾಯಿತು.
ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಕೆ.ಬಾಬು ಶೆಟ್ಟಿ ತಗ್ಗರ್ಸೆ, ಮಾಜೀ ಶಾಸಕ ಕೆ. ಗೋಪಾಲ ಪೂಜಾರಿ, ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ, ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ಶೆಟ್ಟಿ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ರಘುರಾಮ ದೇವಾಡಿಗ ಆಲೂರು, ಮಹಾಲಿಂಗ ನಾಯ್ಕ್, ಕೆ.ಸುಧಾ ಬೈಂದೂರು, ಮಾಜಿ ಸಚಿವ ಅಭಯಚಂದ್ರ ಜೈನ್, ಮಂಗಳೂರು ಮಹಾನಗರಪಾಲಿಕೆ ಮಾಜಿ ಮೇಯರ್ ಭಾಸ್ಕರ್ ಮೊಯಿಲಿ, ರಾಜ್ಯ ಧಾರ್ಮಿಕ ಪರಿಷತ್ ಮಲ್ಲಿಕಾ ಪಕ್ಕಳಾ ಬಂಟ್ವಾಳ, ಉದ್ಯಮಿ ಶಂಕರ ಶೆಟ್ಟಿ ಬೆಂಗಳೂರು, ಪ್ರಮುಖರಾದ ದಿನೇಶ್ ಹೆಗ್ಡೆ ಮೊಳಹಳ್ಳಿ, ಉದಯ್‌ಕುಮಾರ ಶೆಟ್ಟಿ ಮುನಿಯಾಲ್, ಪ್ರಸಾದ್‌ರಾಜ್ ಕಾಂಚನ್, ರಾಜು ಎಸ್ ಪೂಜಾರಿ ಬೈಂದೂರು, ಎಸ್.ಪ್ರಕಾಶ್ಚಂದ್ರ ಶೆಟ್ಟಿ ಕಂಬದಕೋಣೆ, ಪ್ರದೀಪ್‌ಕುಮಾರ ಶೆಟ್ಟಿ ಗುಡಿಬೆಟ್ಟು, ಅರವಿಂದ್ ಪೂಜಾರಿ ಪಡುಕೋಣೆ, ಕಿರಣ್ ಹೆಗ್ಡೆ ಅಂಪಾರು. ಮೋಹನ್ ಪೂಜಾರಿ ಉಪ್ಪುಂದ, ಅಣ್ಣಪ್ಪ ಶೆಟ್ಟಿ ಕಾಲ್ತೋಡು, ಜಗದೀಶ್ ದೇವಾಡಿಗ ಇದ್ದರು.
